ಮಕ್ಕಳ ಕಲ್ಯಾಣ ಸಮಿತಿ, ಬಾಲನ್ಯಾಯ ಮಂಡಳಿ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ
1 min readಚಿತ್ರದುರ್ಗ,ಅಕ್ಟೋಬರ್20:
ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015 ಹಾಗೂ ಬಾಲನ್ಯಾಯ ಮಾದರಿ ನಿಯಮ 2016ರನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಮತ್ತು ಬಾಲನ್ಯಾಯ ಮಂಡಳಿಗಳನ್ನು ರಚಿಸಬೇಕಾಗಿರುತ್ತದೆ. ಮಕ್ಕಳ ಕಲ್ಯಾಣ ಸಮಿತಿಗಳು ಮತ್ತು ಬಾಲನ್ಯಾಯ ಮಂಡಳಿಗಳಿಗೆ 2020 ರಿಂದ 2023ರವರೆಗೆ 3 ವರ್ಷಗಳ ಕಾಲಾವಧಿಗಾಗಿ ಸದಸ್ಯತ್ವಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನವೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ನಮೂನೆ, ಸೂಚನೆಗಳು, ವಿಶೇಷ ಸೂಚನೆಗಳು, ದೃಢೀಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಹಾಗೂ ಸದಸ್ಯ ಕಾರ್ಯದರ್ಶಿಗಳು, ಬೆಂಗಳೂರುರವರ ವೆಬ್‍ಸೈಟ್ www.ieps.karnataka.gov.in ನಲ್ಲಿ ಲಭ್ಯವಿರುತ್ತದೆ. ಮಕ್ಕಳ ಕಲ್ಯಾಣ ಸಮಿತಿ ಮತ್ತು ಬಾಲನ್ಯಾಯ ಮಂಡಳಿಗಳಿಗೆ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸುವುದು.
ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ನೊಂದಾಯಿತ ಅಂಚೆ ಮೂಲಕ (ಆರ್‍ಪಿಎಡಿ) ಅಥವಾ ಮುದ್ದಾಂ ನವೆಂಬರ್ 15ರಂದು ಸಂಜೆ 5.30ರ ಒಳಗೆ ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಹಾಗೂ ಸದಸ್ಯ ಕಾರ್ಯದರ್ಶಿಗಳು, ಕೇರಾಫ್ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೊದಲನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-560001 ಇವರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ (ಅರ್ಜಿ ನಮೂನೆಯು 4 ಪುಟ ಒಳಗೊಂಡಿದೆ) ಮಕ್ಕಳ ರಕ್ಷಣಾ ನಿರ್ದೇಶನಾಲಯ ಹಾಗೂ ಸದಸ್ಯ ಕಾರ್ಯದರ್ಶಿಗಳು, ಬೆಂಗಳೂರು ದೂರವಾಣಿ 080-22879382/83 ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-234992 ಇವರನ್ನು ಸಂಪರ್ಕಿಸುವುದು.
ಚಿತ್ರದುರ್ಗ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷಕರು-01 ಹುದ್ದೆ ಹಾಗೂ ಸದಸ್ಯರು-04 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಾಲ ನ್ಯಾಯ ಮಂಡಳಿಯಲ್ಲಿ ಸದಸ್ಯರು-02 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.