April 25, 2024

Chitradurga hoysala

Kannada news portal

ಆಧಾರ ಸ್ವಯಂ ಉದ್ಯೋಗ ಯೋಜನೆಯಡಿ ಅರ್ಜಿ ಆಹ್ವಾನ

1 min read

ಚಿತ್ರದುರ್ಗ, ಅಕ್ಟೋಬರ್ 23:
2020-21ನೇ ಸಾಲಿನಲ್ಲಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಆಧಾರ ಸ್ವಯಂ ಉದ್ಯೋಗ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
 ಈ ಯೋಜನೆಯಡಿ ಪ್ರಯೋಜವನ್ನು ಪಡೆಯಲು 18 ರಿಂದ 55 ವರ್ಷ ವಯಸ್ಸಿನೊಳಗಿನ ನಿರುದ್ಯೋಗಿ ವಿಕಲಚೇತನರು ಕಡ್ಡಾಯವಾಗಿ ಸೂಕ್ತ ದಾಖಲಾತಿಗಳಾದ ಯೋಜನಾವರದಿ, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಆಧಾರ ಕಾರ್ಡ್ ಲಿಂಕ್ ಮಾಡಿಸಿರುವ ಉಳಿತಾ ಖಾತೆ ಪುಸ್ತಕದ ಪ್ರತಿ ಹಾಗೂ ವೈದ್ಯಕೀಯ ಪ್ರಮಾಣಪತ್ರ, ವಿಕಲಚೇತನರ ಗುರುತಿನ ಚೀಟಿ ಕಾರ್ಡ್, ಇತ್ತೀಚಿನ ಆದಾಯ ಪ್ರಮಾಣ ಪತ್ರ, ಬಿಪಿಎಲ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ, ನಿವಾಸಿ ದೃಢೀಕರಣ ಪತ್ರ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನವಾಗಿದೆ.
 ಈ ಯೋಜನೆಯ ಅರ್ಜಿ ನಮೂನೆಗಳನ್ನು www.welfareofdisabled.kar.nic.in   ವೆಬ್‍ಸೈಟ್‍ನಿಂದ ನೇರವಾಗಿ ಡೌನ್‍ಲೋಡ್ ಮಾಡಿಕೊಳ್ಳಬಹುದು ಅಥವಾ ಆರು ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದ್ದೊದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿ ಅರ್ಜಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ ಮತ್ತು ಮಾಹಿತಿ ಸಲಹಾ ಕೇಂದ್ರ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಸ್ಟೇಡಿಯಂ ರಸ್ತೆ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-235286 ಗೆ ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿಗಾರ:ವಿನಾಯಕ ಚಿತ್ರದುರ್ಗ ಸುದ್ದಿಗೆ ಸಂಪರ್ಕಿಸಿ. 9686622252

About The Author

Leave a Reply

Your email address will not be published. Required fields are marked *