May 3, 2024

Chitradurga hoysala

Kannada news portal

ವಿನಯ್ ಕುಲಕರ್ಣಿ ವಿಚಾರಣೆ ರಾಜಕೀಯ ಪ್ರೇರಿತ: ಮಾಜಿ ಸಿಎಂ ಸಿದ್ದರಾಮಯ್ಯ.

1 min read

ನನ್ನ ಪ್ರಕಾರ ವಿನಯ್ ಕುಲಕರ್ಣಿ ವಿಚಾರಣೆ ರಾಜಕೀಯ ಪ್ರೇರಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಜೊತೆ ನಾನೂ ಮಾತನಾಡಿದ್ದೇನೆ, ನಾನು ಏನೂ ತಪ್ಪು ಮಾಡಿಲ್ಲ ಎಂದು ನನ್ನ ಬಳಿ ಹೇಳಿದ್ದಾನೆ, ಹೀಗಾಗಿ ವಿಚಾರಣೆ ಹಂತದಲ್ಲಿರುವಾಗ ನಾನು ಏನೂ ಹೇಳುವುದಿಲ್ಲ ಎಂದರು. ಅಲ್ಲದೇ ಕೊರೊನಾಗೆ ವ್ಯಾಕ್ಸಿನ್ ಬರುವ ತನಕ ಗ್ರಾ.ಪಂ ಚುನಾವಣೆ ನಡೆಸುವುದಾಗಲೀ, ಶಾಲೆಗಳನ್ನು ಪುನರಾರಂಭ ಮಾಡವುದಾಗಲಿ ಸೂಕ್ತವಲ್ಲ, ಎಲ್ಲಾ ವಿದ್ಯಾರ್ಥಿಗಳನ್ನು ಈ ವರ್ಷ ಪಾಸ್ ಮಾಡಬೇಕು ಎಂದು ಸಲಹೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೊರೊನಾ ಸಂಕಷ್ಟದ ಕಾಲದಲ್ಲಿ ವಿದ್ಯುತ್ ದರ ಏರಿಕೆ ಮಾಡಿರುವುದು ಸರಿಯಿಲ್ಲ ಎಂದರು. ಈ ವೇಳೆ ರಾಜ್ಯದಲ್ಲಿ ಸಿಎಂ ಪುತ್ರನ ಪಾತ್ರದ ಬಗ್ಗೆ ಮಾತನಾಡಿ,
ರಾಜ್ಯದಲ್ಲಿ ಇಬ್ಬರು ಸಿಎಂ ಇದ್ದಾರೆ, ಅದರಲ್ಲಿ ವಿಜಯೇಂದ್ರ ಡಿ ಫ್ಯಾಕ್ಟರ್ ಸಿಎಂ ಆಗಿದ್ದಾರೆ, ರಾಜ್ಯದ ಹಣಕಾಸು ಪರಿಸ್ಥಿತಿ ತೀವ್ರ ಹದಗೆಟ್ಟಿದೆ, ಸಂಬಳ ಕೊಡಲು ಹಣವಿಲ್ಲ ಎಂದು ಸರ್ಕಾರದ ಕಾರ್ಯವೈಖರಿಯನ್ನು ಖಂಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕುರಿತ ಮಾಧ್ಯಮದವರ ಪ್ರಶ್ನೆಗೆ ಆತ ಅಪ್ರಬುದ್ದ, ಆತನ ಬಗ್ಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ‌ ಎಂದು ವ್ಯಂಗ್ಯವಾಡಿದರು..

About The Author

Leave a Reply

Your email address will not be published. Required fields are marked *