Big breaking: ಗ್ರಾಮ ಪಂಚಾಯತಿ ಚುನಾವಣೆಗೆ ಓಕೆ ಎಂದ ಹೈಕೋರ್ಟ್
1 min read3 ವಾರದಲ್ಲಿ ವೇಳಾಪಟ್ಟಿ ಪ್ರಕಟಿಸಲು ಸೂಚನೆ
ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ರಾಜ್ಯ ಉಚ್ಛ ನ್ಯಾಯಾಲಯವು ಅನುಮತಿ ನೀಡಿದ್ದು, ಮೂರು ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.
ಅವಧಿ ಮುಗಿದ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಕೆ.ಸಿ ಕೊಂಡಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಸುದೀರ್ಘ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಅ.23ಕ್ಕೆ ವಿಚಾರಣೆ ಮುಗಿಸಿ ತೀರ್ಪು ಕಾಯ್ದಿರಿಸಿತ್ತು.
ರಾಜ್ಯದಲ್ಲಿ ಬಾಕಿಯಿರುವ 5800 ಗ್ರಾಮ ಪಂಚಾಯತ್ ಗಳ ಚುನಾವಣೆಯನ್ನು ನಡೆಸಬೇಕು. ಮೂರು ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸಬೇಕು ಎಂದು ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ
ಚುನಾವಣಾ ಪ್ರಕ್ರಿಯಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಸ್ಪಷ್ಟವಾಗಿ ಹೇಳಿರುವ ಹೈಕೋರ್ಟ್, ಚುನಾವಣಾ ಕಾರ್ಯಕ್ಕೆ ಸಿಬ್ಬಂದಿ ಅವಶ್ಯಕತೆ ಇದ್ದರೆ ರಾಜ್ಯಪಾಲರಿಗೆ ಮನವಿ ಸಲ್ಲಿಸುವಂತೆ ಆಯೋಗಕ್ಕೆ ಸೂಚನೆ ನೀಡಿದೆ.