ವಿಜಯ ನಗರ ನೂತನ ಜಿಲ್ಲಾ ಕೇಂದ್ರವಾಗಿಸಲು ಸಂಪುಟ ಒಪ್ಪಿಗೆಗೆ ಸ್ವಾಗತ:ಆನಂದ್ ಸಿಂಗ್
1 min read
ವಿಜಯನಗರ ಪ್ರತ್ಯೇಕ ಜಿಲ್ಲೆ ನಿರ್ಮಾಣಕ್ಕೆ ಬಹಳ ಪ್ರಯತ್ನ ಮಾಡಿದ್ದ ಆನಂದ್ ಸಿಂಗ್ ಅವರು ಇವತ್ತಿನ ಸಂಪುಟ ಸಭೆ ನಿರ್ಧಾರವನ್ನು ಸ್ವಾಗತಿಸಿದರು. ವಿಜಯನಗರ ಜಿಲ್ಲೆಯಾಗಬೇಕು ಎಂಬುದು ಬಹುದಿನದ ಬೇಡಿಕೆ. ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳ ಬೇಡಿಕೆ ಈಡೇರಿದೆ. ಈ ನಿಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ ಎಂದು ಆನಂದ್ ಸಿಂಗ್ ತಿಳಿಸಿದರು.
ಇತಿಹಾಸ ಪುಟದಲ್ಲಿ ಸೇರುವ ದಿನ ಇದು. ಅಂದಿನ ರಾಜಧಾನಿ ಹಂಪಿಯನ್ನು ಎತ್ತಿ ಹಿಡಿಯುವ ಕೆಲಸವನ್ನು ಸಿಎಂ ಮಾಡಿದ್ದಾರೆ. ವಿಜಯನಗರ ಜಿಲ್ಲೆಯು ರಾಜ್ಯ ಹಾಗೂ ರಾಷ್ಟ್ರಕ್ಕೆ ಹೆಮ್ಮೆಯ ವಿಚಾರವಾಗಿದೆ. ಜಿಲ್ಲೆಯ ಎಲ್ಲಾ ಜನರ ಪರವಾಗಿ ಸಿಎಂಗೆ ಧನ್ಯವಾದಗಳನ್ನ ಹೇಳುತ್ತೇನೆ ಎಂದರು.
ಪ್ರಸ್ತಾಪಿತ ವಿಜಯನಗರ ಜಿಲ್ಲೆಗೆ ಈಗ ಬಳ್ಳಾರಿಯಲ್ಲಿರುವ ಹೂವಿನಹಡಗಲಿ, ಕೊಟ್ಟೂರು, ಹರಪನಹಳ್ಳಿ, ಕೂಡ್ಲಿಗಿ, ಹೊಸಪೇಟೆ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕುಗಳು ಸೇರಲಿವೆ. ಹೊಸಪೇಟೆಯು ಜಿಲ್ಲಾ ಕೇಂದ್ರವಾಗಿರಲಿದೆ.