ಸರ್ಕಾರಿ ರಾಜ್ಯ ನೌಕರರ ಹಿರಿಯೂರು ಸಂಘದ ನೂತನ ಅಧ್ಯಕ್ಷರಾಗಿ ಶಿವಕುಮಾರ್ ಆಯ್ಕೆ.
1 min readಹಿರಿಯೂರು:ಹಿರಿಯೂರು ತಾಲ್ಲೂಕಿನಲ್ಲಿ ರಾಜೀನಾಮೆಯಿಂದ ತೆರವಾಗಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ದಿನಾಂಕ 19.11.2020 ರಂದು ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಶ್ರೀ ಶಿವಕುಮಾರ್ (ಶಿಕ್ಷಣ ಇಲಾಖೆ) ರವರು ಆಯ್ಕೆಯಾಗಿರುತ್ತಾರೆ.
ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಮಂಜುನಾಥ ಕೆ, ಗೌರವಾಧ್ಯಕ್ಷರಾದ ಶ್ರೀ ಲೋಕೇಶ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರದೀಪ್ ಕುಮಾರ್ ಜಿ ಆರ್, ರಾಜ್ಯ ಪರಿಷತ್ ಸದಸ್ಯರಾದ ಶ್ರೀ ಕೆ.ಟಿ.ತಿಮ್ಮರೆಡ್ಡಿ, ಕೋಶಾಧ್ಯಕ್ಷರಾದ ಶ್ರೀ ವೀರೇಶ್, ತಾಲ್ಲೂಕು ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರು, ನಾಮನಿರ್ದೇಶಿತ ಸದಸ್ಯರು ನೂತನವಾಗಿ ಹಿರಿಯೂರು ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಶಿವಕುಮಾರ್ ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ.