ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ: ಸಂತೆ, ಜಾತ್ರೆ ಮತ್ತು ಉತ್ಸವ ನಿಷೇಧ
1 min readಚಿತ್ರದುರ್ಗ, ಡಿಸೆಂಬರ್09:
ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2020ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದಲ್ಲಿ ಚಿತ್ರದುರ್ಗ, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕುಗಳಲ್ಲಿ ಮತದಾನವು ಡಿ.22ರಂದು ಹಾಗೂ ಎರಡನೇ ಹಂತದಲ್ಲಿ ಹಿರಿಯೂರು, ಚಳ್ಳಕೆರೆ ಹಾಗೂ ಮೊಳಕಾಲ್ಮುರು ತಾಲ್ಲೂಕುಗಳಲ್ಲಿ ಮತದಾನವು ಡಿ.27ರಂದು ನಡೆಯಲಿದ್ದು, ಮತದಾನ ನಡೆಯುವ ದಿನಾಂಕಗಳಂದು ಬೆಳಿಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಗೆಯ ಸಂತೆ, ಜಾತ್ರೆ, ಉತ್ಸವ ಇತ್ಯಾದಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.