ಅಂಚೆ ಇಲಾಖೆಯಲ್ಲಿ ಉದ್ಯೋಗಕ್ಕೆ ಅರ್ಜಿ ಆಹ್ವಾನ
1 min readಬೆಂಗಳೂರು,29: ಭಾರತೀಯ ಅಂಚೆ ಇಲಾಖೆ ಕರ್ನಾಟಕ ಅಂಚೆ ವೃತ್ತದಲ್ಲಿ 2443 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಡಾಕ್ ಸೇವಕ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 20/1/2020 ಕೊನೆಯ ದಿನ.
ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗೆ 12 ರಿಂದ 14 ಸಾವಿರ ರೂ. ವೇತನ, ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗೆ 10 ರಿಂದ 12 ಸಾವಿರ ರೂ. ವೇತನ, ಡಾಕ್ ಸೇವಕ್ ಹುದ್ದೆಗಳಿಗೆ 10 ರಿಂದ 12 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21/12/2020ಕ್ಕೆ ಸರಿಯಾಗಿ 18 ವರ್ಷ ಆಗಿರಬೇಕು. ಗರಿಷ್ಠ 40 ವರ್ಷಗಳ ವಯೋಮಿತಿ ಮೀರಿರಬಾರದು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇದೆ.
ವಿದ್ಯಾರ್ಹತೆ; ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಯು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಪಡೆದಿರಬೇಕು ಹಾಗೂ ಕರ್ನಾಟಕ ಅಧಿಕೃತ ಭಾಷೆ ಕನ್ನಡವನ್ನು ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು. ಬೇಸಿಕ್ ಕಂಪ್ಯೂಟರ್ ಜ್ಞಾನ ಮತ್ತು ಪ್ರಮಾಣ ಪತ್ರವನ್ನು ಹೊಂದಿರಬೇಕು.
ಅರ್ಜಿ ಶುಲ್ಕ: ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿಸಬೇಕು. ಎಸ್‌ಟಿ/ ಎಸ್‌ಟಿ/ ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳ ನಿಯಮಾನುಸಾರ ಸ್ವಯಂ ಚಾಲಿತ ಮೆರಿಟ್ ಪಟ್ಟಿ ತಯಾರು ಮಾಡುವ ಮೂಲಕ ನೇಮಕಾತಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ನೇಮಕಾತಿ ಮಾಡಲಾಗುತ್ತದೆ.