ದಳ ಬಿಟ್ಟು ಕೈ ಹಿಡಿಯಲು ಸಿದ್ದವಾದ ಮಧು ಬಂಗಾರಪ್ಪ .
1 min readಶಿವಮೊಗ್ಗ:ದಿ. 7. ಹಲವು ದಿನಗಳಿಂದ ಮಧು ಬಂಗಾರಪ್ಪ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿಕೊಳ್ಳಲಿದ್ದಾರೆ ಎಂಬ ಊಹಾಪೋಹಗಳಿಗೆ ಸ್ವತಃ ಮಧು ಬಂಗಾರಪ್ಪ ಅವರು ತಾವೂ ಶೀಘ್ರದಲ್ಲಿಯೇ ಕಾಂಗ್ರೆಸ್ ಸೇರ್ಪಡಗೊಳ್ಳುತ್ತೇನೆಂದು ಗುರುವಾರ ತಿಳಿಸಿದ್ದಾರೆ.
2018ರ ಲೋಕಸಭೆ ಚುನಾವಣೆಯಿಂದಲೂ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತರೆಂಬ ಮಾತುಗಳು ಕೇಳಿಬರುತ್ತಿದ್ದವು. ಇದಕ್ಕೆ ಪೂರಕವೆಂಬಂತೆ ಚುನಾವಣೆ ವೇಳೆ ಕಾಂಗ್ರೆಸ್ ನಾಯಕರಾದ ಕಾಗೋಡು ತಿಮ್ಮಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಮಧು ಬಂಗಾರಪ್ಪ ಪರ ಪ್ರಚಾರ ನಡೆಸಿದ್ದರು.
ಕಾಂಗ್ರೆಸ್ ನಿಂದ ಇಷ್ಟೆಲ್ಲಾ ಬೆಂಬಲ ದೊರೆತಿದ್ದರೂ ಸಹಾ ಮಧು ಬಂಗಾರಪ್ಪ ಅವರು ಚುನಾವಣೆಯಲ್ಲಿ ಸೋಲುಕಂಡಿದ್ದರು. ಸೋಲಿನ ನಂತರ ಜೆಡಿಎಸ್ನಿಂದ ಅಂತರ ಕಾಯ್ದುಕೊಂಡಿದ್ದ ಮಧು ಬಂಗಾರಪ್ಪ ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲೂ ಪಾಲ್ಗೊಂಡಿರಲಿಲ್ಲ. ಇದೀಗ ಅವರೇ ಸ್ವತಃ ತಾವೂ ಕಾಂಗ್ರೆಸ್ ಸೇರಲಿದ್ದೇನೆ ಎಂದು ಹೇಳುವ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.