March 3, 2024

Chitradurga hoysala

Kannada news portal

ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ವಿತರಣೆಗೆ ಅರ್ಜಿ ಅಹ್ವಾನ.

1 min read

ಚಿತ್ರದುರ್ಗ, ಜನವರಿ19:
ಪ್ರಸಕ್ತ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಎಸ್‍ಎಸ್‍ಎಲ್‍ಸಿ ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್‍ಗಳನ್ನು ವಿತರಿಸುವ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನ.
ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳಾದ ವೈದ್ಯಕೀಯ ಪ್ರಮಾಣ ಪತ್ರ, ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ) ನಿವಾಸಿ ಧೃಢಿಕರಣ ಪತ್ರ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಶಾಲಾ ಕಾಲೇಜಿನ ಐಡಿ ಕಾರ್ಡ್, ಶಾಲಾ ಕಾಲೇಜುಗಳಲ್ಲಿ ಹಾಗೂ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯಿಂದ ಯಾವುದೇ ಅನುದಾನದಲ್ಲಿ ಅಥವಾ ಇತರೆ ಇಲಾಖೆಗಳಿಂದ ಯಾವುದೇ ಅನುದಾನದಲ್ಲಿ ಬ್ರೈಲ್ ಕಿಟ್‍ಗಳನ್ನು ಪಡೆಯದೆ ಇರುವ ಬಗ್ಗೆ ಮುಚ್ಚಳಿಕೆ ಪತ್ರ, ಎರಡು ಪೊಟೊಗಳೊಂದಿಗೆ ದ್ವಿ ಪ್ರತಿಯಲ್ಲಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನ ಹಾಗೂ ನಾಗರಿಕ ಸಬಲೀಕರಣ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಸ್ಟೇಡಿಯಂ ರಸ್ತೆ ಚಿತ್ರದುರ್ಗ, ದೂರವಾಣಿ ಸಂಖ್ಯೆ 08194-235286 ಇವರನ್ನು ಸಂಪರ್ಕಿಸಬಹುದು ಅಥವಾ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು (ಎಂಆರ್‍ಡಬ್ಲ್ಯೂ) ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೈಶಾಲಿ ಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *