ಜ.20ರಿಂದ ಶಾಂತಿಸಾಗರ ನೀರು ಸರಬರಾಜು ತಾತ್ಕಾಲಿಕ ಸ್ಥಗಿತ.
1 min readಚಿತ್ರದುರ್ಗ: ಜನವರಿ19:
ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಆಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ರೇಚಕ ಘಟಕದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ವತಿಯಿಂದ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಜನವರಿ 20 ರಿಂದ 22ರ ವರೆಗೆ ನೀರು ಸರಬರಾಜನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.
ಸಾರ್ವಜನಿಕರು ತಮ್ಮ ತಮ್ಮ ಪ್ರದೇಶಗಳಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಬೇಕು. ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತ ಜೆ.ಟಿ.ಹನುಮಂತರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.