September 16, 2024

Chitradurga hoysala

Kannada news portal

ಯುವಕರಿಗೆ ಬೈಕ್ ತೆಗೆದುಕೊಳ್ಳಲು ಸಹಾಯಧನಕ್ಕೆ ಅರ್ಜಿ ಆಹ್ವಾನ.

1 min read

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
*******
ಚಿತ್ರದುರ್ಗ,ಜನವರಿ20:
ಪ್ರಸಕ್ತ ಸಾಲಿಗೆ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಅಭಿವೃದ್ಧಿ ನಿಗಮ ನಿಯಮಿತದಿಂದ ಯುವಕರಿಗೆ ಬೈಕ್ ಕೊಂಡುಕೊಳ್ಳಲು ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 30ರವರೆಗೆ ವಿಸ್ತರಿಸಲಾಗಿದೆ.
 ಇ- ವಾಣಿಜ್ಯ ಸಂಸ್ಥೆಗಳಾದ ಜೊಮಟೊ, ಸ್ವೀಗ್ಗಿ, ಉಬರ್, ಅಮೆಜನ್ ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು, ಮನೆ ಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ-2ಎ, 3ಎ, ಮತ್ತು 2ಬಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ, ಅರೆ ಅಲೆಮಾರಿ ಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತು ಪಡಿಸಿ) ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ರೂ.25,000/-ಗಳ ಸಹಾಯಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳಿಂದ ಸಾಲ ಪಡೆಯುವುದು.
ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
  ಈ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಹಿಂದುಳಿದ ವರ್ಗದ ಫಲಾಪೇಕ್ಷಿಗಳು, ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಅಭಿವೃದ್ಧಿ ನಿಗಮ ಜಿಲ್ಲಾ ಕಚೇರಿಯಲ್ಲಿ ಉಚಿತ ಅರ್ಜಿಗಳನ್ನು ಪಡೆಯುವುದು ಅಥವಾ ನಿಗಮದ ವೆಬ್ ಸೈಟ್ ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಜನವರಿ 30ರ ರೊಳಗೆ ಸಲ್ಲಿಸುವುದು.
  ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಅಭಿವೃದ್ಧಿ ನಿಗಮ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ:08194-220882 ಗೆ ಸಂಪರ್ಕಿಸಬಹುದು ಎಂದು  ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕ ಎನ್. ಆರ್.ಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *