May 23, 2024

Chitradurga hoysala

Kannada news portal

ಜ.27ರಂದು ವಿದ್ಯುತ್ ವ್ಯತ್ಯಯ

1 min read

ಚಿತ್ರದುರ್ಗ,ಜನವರಿ25:
ಚಿತ್ರದುರ್ಗ ನಗರ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹುಚ್ಚಂಗಿಯಲ್ಲಮ್ಮ ದೇವಸ್ಥಾನದಿಂದ ರಂಗಯ್ಯನಬಾಗಿಲುವರೆಗೂ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜನವರಿ 27ರಂದು ಬೆಳಿಗ್ಗೆ 10ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ನಗರದ ದೊಡ್ಡಪೇಟೆ ರಸ್ತೆ, ಉಯ್ಯಲೆ ಕಂಬ, ಮೈಸೂರು ಕೆಫೆ, ಚಿಕ್ಕಪೇಟೆ, ಸವಿತಾ ಸಮಾಜ ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆಯಾಗಲಿದೆ.
 ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *