ನಾಳೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರಿಂದ ಧ್ವಜಾರೋಹಣ
1 min read
ಚಿತ್ರದುರ್ಗ, ಜನವರಿ25:
ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಜನವರಿ 26 ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಜ.25ರಂದು ಮಧ್ಯಾಹ್ನ 3ಕ್ಕೆ ಬಳ್ಳಾರಿಯಿಂದ ಹೊರಟು ಸಂಜೆ 5ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ಚಿತ್ರದುರ್ಗದಲ್ಲಿ ವಾಸ್ತವ್ಯ ಹೂಡುವರು. ಜ.26ರಂದು ಬೆಳಿಗ್ಗೆ 9.00 ಗಂಟೆಗೆ ಚಿತ್ರದುರ್ಗ ನಗರ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿರುವ ಭಾರತ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ನಂತರ ಬೆಳಿಗ್ಗೆ 11ಕ್ಕೆ ಬೆಳಗಾವಿ ಜಿಲ್ಲೆ ನಿಪ್ಪಾಣಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.