ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉಪ ನಿರ್ದೇಶಕ ರಾಜನಾಯ್ಕ ಅವರಿಂದ ಧ್ವಜಾರೋಹಣ.
1 min readಚಿತ್ರದುರ್ಗ: ನಗರದ ಜಿಲ್ಲಾ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 72 ನೇ ಗಣರಾಜ್ಯೋತ್ಸವದ ಧ್ವಜರೋಹಣವನ್ನು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕರಾದ ಕೆ.ಎಸ್.ರಾಜನಾಯ್ಕ ಅವರು ನೆರವೇರಿಸಿದರು. ಜಿಲ್ಲಾ ವಿಕಲಚೇತನ ಕಲ್ಯಾಣಧಿಕಾರಿ ಜೆ.ವೈಶಾಲಿ, ನಿರೂಪಣಾಧಿಕಾರಿ ಭಾರತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕೇಶಪ್ಪ, ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ಸುಧಾ, ಮಹಿಳಾ ಅಭಿವೃದ್ಧಿ ನಿಗಮದ ಸುವರ್ಣಮ್ಮ ಮತ್ತು ಇಲಾಖೆ ಸಿಬ್ಬಂದಿಗಳು ಇದ್ದರು.