ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಉತ್ತಮ ಸೇವೆ ಸಲ್ಲಿಸಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ ಸೇರಿ ಹಲವರಿಗೆ ಸನ್ಮಾನ
1 min read ಚಿತ್ರದುರ್ಗ: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಉತ್ತಮ ಸೇವೆ ಸಲ್ಲಿಸಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವರಾಜ್, ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವೆಂಕಟೇಶ್ ಹಾಗೂ ಬಸವೇಶ್ವರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಪಾಲಾಕ್ಷಯ್ಯ ಅವರಿಗೆ ಸಚಿವರು ಆತ್ಮೀಯವಾಗಿ ಸನ್ಮಾನಿಸಿದರು.
ಸಾಂಸ್ಕøತಿಕ ಕಾರ್ಯಕ್ರಮ: ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಕೊರೊನಾ ಸಾಂಕ್ರಾಮಿಕ ರೋಗವನ್ನು ನಿರ್ವಹಿಸಿದ ಬಗೆಯನ್ನು ಡಾನ್ ಬಾಸ್ಕೊ ಶಾಲೆಯ ವಿದ್ಯಾರ್ಥಿಗಳು ಆಕರ್ಷಕ ನೃತ್ಯ ರೂಪಕದ ಮೂಲಕ ತಿಳಿಸಿಕೊಟ್ಟರು.
ಆರೋಗ್ಯ ಇಲಾಖೆ ಸಿಬ್ಬಂದಿ ರೋಗದಿಂದ ಹೇಗೆ ತಮ್ಮನ್ನು ತಾವು ಕಾಪಾಡಿಕೊಳ್ಳಬೇಕು ಎಂದು ಜನರಿಗೆ ತಿಳಿಸಿಕೊಟ್ಟ ಬಗೆ, ಲಾಕ್‍ಡೌನ್ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿ ಕರ್ತವ್ಯ, ಇಡೀ ಪರಿಸರವನ್ನು ಸ್ವಚ್ಛತೆ ಕಾಪಾಡುವ ಮೂಲಕ ಕೊರೊನಾ ವಿರುದ್ಧದ ಹೋರಾಟ ನಡೆಸಿದ ಸ್ವಚ್ಛತಾ ಕಾರ್ಮಿಕರು, ಜನಪ್ರತಿನಿಧಿಗಳು ಹಾಗೂ ಸರ್ಕಾರೇತ ಸಂಘ ಸಂಸ್ಥೆಗಳು ಸೇವೆ ಮಾಡಿದ ಬಗೆಯನ್ನು ನೃತ್ಯದ ಮೂಲಕ ಮನಮೋಹಕವಾಗಿ ಪ್ರಸ್ತುತ ಪಡಿಸಿದರು.