March 2, 2024

Chitradurga hoysala

Kannada news portal

ಶಾಲಾ ವಾಹನ ಪಲ್ಟಿ 15 ಮಕ್ಕಳು ಗಾಯಗೊಂಡು ಆಸ್ಪತ್ರೆಗೆ ದಾಖಲು.

1 min read

ಮುಳಬಾಗಿಲು:ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾಗಿ 15 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೀಗೇನಹಳ್ಳಿ ಗೇಟ್ ಬಳಿ ನಡೆದಿದೆ.

ಸೋಮವಾರ ಬೆಳ್ಳಿಗ್ಗೆ ಈ ಘಟನೆ ನಡೆದಿದ್ದು, ಮುಳಬಾಗಿಲು ಪಟ್ಟಣದ  ಶ್ರೀಸಾಯಿ ಇಂಟರ್​ನ್ಯಾಷನಲ್ ಶಾಲೆಯ ವಾಹನ ಪಲ್ಟಿಯಾಗಿದೆ. ಹೆಬ್ಬಣಿ, ಬೈರಕೂರು ಹಾಗೂ ನಂಗಲಿಯಿಂದ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ವಾಹನದಲ್ಲಿ ಅದರ ಸಾಮರ್ಥ್ಯಕ್ಕೂ ಮೀರಿ ವಿದ್ಯಾರ್ಥಿಗಳನ್ನ ತುಂಬಿದ್ದೆ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.  ಗಾಯಗೊಂಡ 15 ಮಕ್ಕಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಕುಶಾಲ್ ಎಂಬ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ಉಳಿದವರನ್ನ  ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *