ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ
1 min readಚಿತ್ರದುರ್ಗ,ಜನವರಿ28:
2020-2021ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರುವರಿ 10 ಕೊನೆಯ ದಿನವಾಗಿದೆ.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಜೋಗಿಮಟ್ಟಿ ರಸ್ತೆ ಚಿತ್ರದುರ್ಗ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಕಲಾ ಕಾಲೇಜು ಹಿಂಭಾಗ ಚಿತ್ರದುರ್ಗ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ (ವೃತಿಪರ) ಬಾಲಕಿಯರ ವಿದ್ಯಾರ್ಥಿನಿಲಯ ಕಲಾ ಕಾಲೇಜು ಹಿಂಭಾಗ ಚಿತ್ರದುರ್ಗ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಎಲ್.ಐ.ಸಿ ಬಡಾವಣೆ ಹಿರಿಯೂರು, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಅವಧಾನಿ ನಗರ ರಸ್ತೆ ಹಿರಿಯೂರು, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಘಫರ್ ಷರೀಫ್ ಕಾಲೋನಿ ಹೊಸದುರ್ಗ ಈ ವಿದ್ಯಾರ್ಥಿನಿಲಯಗಳಲ್ಲಿ ಆಸಕ್ತರು ಅರ್ಜಿಗಳನ್ನು ಪಡೆದುಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕು ವಿಸ್ತರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.