May 5, 2024

Chitradurga hoysala

Kannada news portal

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

1 min read

ಚಿತ್ರದುರ್ಗ,ಜನವರಿ28:
2020-2021ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ  ಮೆಟ್ರಿಕ್ ನಂತರದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ.
 ವಿದ್ಯಾರ್ಥಿಗಳು ಕಡ್ಡಾಯವಾಗಿ ಅಗತ್ಯ ದಾಖಲಾತಿಗಳೊಂದಿಗೆ ಇಲಾಖೆಯ www.tw.kar.nic.inವೆಬ್ ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸದಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರು ಆಗದಿದ್ದಲ್ಲಿ ಕಾಲೇಜಿನ ಪ್ರವೇಶ ಶುಲ್ಕ ಮತ್ತು ಇತರೆ ಶುಲ್ಕಗಳು ಪಾವತಿಯಾಗದಿದ್ದಲ್ಲಿ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರೇ ಜವಾಬ್ದಾರಾಗಿರುತ್ತಾರೆ.
   ಅರ್ಜಿ ಸಲ್ಲಿಸುವ ಪ್ರಕ್ರಿಯೆ: ನೊಂದಣಿ(ಒಮ್ಮೆ ಮಾತ್ರ) ಈ ಹಿಂದಿನ ವರ್ಷದಲ್ಲಿ ಎಸ್‍ಎಸ್‍ಪಿ ಮೂಲಕ ವಿದ್ಯಾರ್ಥಿವೇತನ ಪಡೆದಿದ್ದಲ್ಲಿ ನೊಂದಣಿ ಪ್ರಕ್ರಿಯೆ ಅಗತ್ಯವಿಲ್ಲ. ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಲಾಗಿನ್ ಆಗಿ ಇ-ದೃಢೀಕರಣ ಹಂತದವರೆಗೆ ಅರ್ಜಿಯನ್ನು ಸಲ್ಲಿಸಬೇಕು, ಕಾಲೇಜಿನ ಇ-ದೃಢೀಕರಣ ಅಧಿಕಾರಿಗಳಿಂದ ತಮ್ಮ ದಾಖಲೆಗಳನ್ನು ಇ-ದೃಢೀಕರಣ ಮಾಡಿ ಮತ್ತು ಇ-ದೃಢೀಕರಣ ಐಡಿಯನ್ನು ಪಡೆಯಬೇಕು. ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಲಾಗಿನ್ ಆಗಿ ಇ-ದೃಢೀಕರಣ ಐಡಿಗಳನ್ನು ನಮೂದಿಸಿ ಮತ್ತು ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ಕಾಲೇಜಿನ ಪ್ರಾಚಾರ್ಯರು, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *