ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ
1 min readಚಿತ್ರದುರ್ಗ,ಫೆಬ್ರುವರಿ03:
ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮ ಪಂಚಾಯಿತಿ ಗ್ರಂಥಾಲಯಲ್ಲಿ ಹಾಗೂ ಮೊಳಕಾಲ್ಮುರು ಕೊಳಚೆ ಪ್ರದೇಶದ ಭೋವಿ ಕಾಲೋನಿಯ ಗ್ರಂಥಾಲಯಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗೆ ಗೌರವ ಸಂಭಾವನೆ ಆಧಾರದ ಮೇರೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರುವರಿ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಕೂನಬೇವು ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ: ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರನ್ನು ಮಾಸಿಕ ಗೌರವ ಧನ ರೂ.7000/- ಗಳ (ಏಳು ಸಾವಿರ ಮಾತ್ರ) ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಫೆ.17ರೊಳಗೆ ಪಿಡಿಒ, ಪಂಚಾಯಿತಿ ಕಾರ್ಯದರ್ಶಿಗೆ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ಪಡೆಯಬಹುದು. ಗ್ರಂಥಾಲಯದ ಮೇಲ್ವಿಚಾರಕರ ಸ್ಥಾನವು ಸಾಮಾನ್ಯ ವರ್ಗದ ಅಭ್ಯರ್ಥಿಗೆ ಮೀಸಲಾಗಿರುತ್ತದೆ.
ಅರ್ಹತೆಗಳು: ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿರಬೇಕು.(ತಹಶೀಲ್ದಾರ್ ಕಚೇರಿಯಿಂದ ಪಡೆದಿರುವ ದೃಢೀಕರಣ ಪತ್ರ ಲಗತ್ತಿಸಿರಬೇಕು) ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಟಿಸಿ, ಮೀಸಲಾತಿ ಪ್ರಮಾಣ ಪತ್ರ, ಸ್ಥಳೀಯ ವಾಸಿ ದೃಢೀಕರಣ ಪತ್ರ, ಅಂಗವಿಕಲತೆ ಇದ್ದಲ್ಲಿ ದೃಢೀಕರಣ ಪತ್ರ) ಗಳೊಂದಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಥವಾ ಪಂಚಾಯ್ತಿ ಕಾರ್ಯದರ್ಶಿಗಳಿಗೆ ಸಲ್ಲಿಸತಕ್ಕದ್ದು. ವಯಸ್ಕರ ಶಿಕ್ಷಣದಡಿ ನಡೆಯುತ್ತಿರುವ ಮುಂದುವರಿಕಾ ಕಲಿಕಾ ಕೇಂದ್ರಗಳ ಪ್ರೇರಕ ಅಥವಾ ಉಪಪ್ರೇರಕರು ಸಹ ಅರ್ಜಿ ಸಲ್ಲಿಸಬಹುದು (ದೃಢೀಕರಣ ಪತ್ರ ಲಗತ್ತಿಸಿರಬೇಕು) ಮೇಲ್ವಿಚಾರಕರಾಗಿ ನೇಮಕಗೊಂಡ ನಂತರ ಪ್ರೇರಕ ಅಥವಾ ಉಪಪ್ರೇರಕರ ಹುದ್ದೆಗೆ ರಾಜೀನಾಮೆ ನೀಡತಕ್ಕದ್ದು ಹಾಗೂ ಬಿಡುಗಡೆ ಪತ್ರವನ್ನು ಸಂಬಂಧಿಸಿದ ಇಲಾಖೆಯಿಂದ ಪಡೆದು ಈ ಕಚೇರಿಗೆ ಸಲ್ಲಿಸತಕ್ಕದ್ದು. ಪ್ರೇರಕ ಅಥವಾ ಉಪಪ್ರೇರಕರಿಗೆ ಮೀಸಲಾತಿ ಅನ್ವಯಿಸುತ್ತದೆ. ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು, ಗರಿಷ್ಠ ವಯೋಮಿತಿ 35 ವರ್ಷ. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಜಿಲ್ಲಾ ಕೇಂದ್ರ ಗ್ರಂಥಾಲಯ ಅಥವಾ ಕೂನಬೇವು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಮೊಳಕಾಲ್ಮುರು ಕೊಳಚೆ ಪ್ರದೇಶದ ಭೋವಿ ಕಾಲೋನಿಯ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದ ಭೋವಿ ಕಾಲೋನಿಯ ಕೊಳಚೆ ಪ್ರದೇಶದ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರನ್ನು ಮಾಸಿಕ ಗೌರವ ಧನ ರೂ.5000/-ಗಳ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಫೆ.ಲ17ರೊಳಗೆ ಮುಖ್ಯಾಧಿಕಾರಿ ಪಟ್ಟಣ ಪಂಚಾಯಿತಿ ಮೊಳಕಾಲ್ಮುರು ಇವರಿಗೆ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಸಂಬಂಧಪಟ್ಟ ಪಟ್ಟಣ ಪಂಚಾಯಿತಿಯಲ್ಲಿ ಪಡೆಯಬಹುದು. ಈ ಮೇಲ್ಚಿಚಾರಕ ಹುದ್ದೆಯು ಪರಿಶಿಷ್ಟ ಜಾತಿ ಅಭ್ಯರ್ಥಿಗೆ ಮೀಸಲಾಗಿರುತ್ತಿದೆ.
ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು ಸ್ಥಳೀಯ ಭೋವಿ ಕಾಲೋನಿಯ ವ್ಯಾಪ್ತಿಗೆ ಸೇರಿರಬೇಕು ( ತಹಶೀಲ್ದಾರ್ ಕಚೇರಿಯಿಂದ ಪಡೆದಿರುವ ದೃಢೀಕರಣ ಪತ್ರ ಲಗತ್ತಿಸಿರಬೇಕು) ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ,ಆಧಾರ್ ಕಾರ್ಡ್, ಟಿಸಿ, ಮೀಸಲಾತಿ ಪ್ರಮಾಣ ಪತ್ರ, ಸ್ಥಳೀಯ ವಾಸಿ ದೃಡೀಕರಣ ಪತ್ರ, ಅಂಗವಿಕಲತೆ ಇದ್ದಲ್ಲಿ ದೃಢೀಕರಣ ಪತ್ರ)ಗಳೊಂದಿಗೆ ಮುಖ್ಯಾಧಿಕಾರಿ ಪಟ್ಟಣ ಪಂಚಾಯತ್ ಮೊಳಕಾಲ್ಮೂರು ಇವರಿಗೆ ಸಲ್ಲಿಸತಕ್ಕದ್ದು. ವಯಸ್ಕರ ಶಿಕ್ಷಣದಡಿ ನಡೆಯುತ್ತಿರುವ ಮುಂದುವರಿಕಾ ಕಲಿಕಾ ಕೇಂದ್ರಗಳ ಪ್ರೇರಕ ಅಥವಾ ಉಪಪ್ರೇರಕರು ಸಹ ಅರ್ಜಿ ಸಲ್ಲಿಸಬಹುದು ( ದೃಢೀಕರಣಪತ್ರ ಲಗತ್ತಿಸಿರಬೇಕು) ಮೇಲ್ವಿಚಾರಕರಾಗಿ ನೇಮಕಗೊಂಡ ನಂತರ ಪ್ರೇರಕ ಅಥವಾ ಉಪಪ್ರೇರಕರ ಹುದ್ದೆಗೆ ರಾಜೀನಾಮೆ ನೀಡತಕ್ಕದ್ದು ಹಾಗೂ ಬಿಡುಗಡೆ ಪತ್ರವನ್ನು ಸಂಬಂಧಿಸಿದ ಇಲಾಖೆಯಿಂದ ಪಡೆದು ಈ ಕಚೇರಿಗೆ ಸಲ್ಲಿಸತಕ್ಕದ್ದು. ಪ್ರೇರಕ ಅಥವಾ ಉಪಪ್ರೇರಕರಿಗೆ ಮೀಸಲಾತಿ ಅನ್ವಯಿಸುತ್ತದೆ. ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು, ಗರಿಷ್ಠ ವಯೋಮಿತಿ 40 ವರ್ಷ. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಜಿಲ್ಲಾ ಕೇಂದ್ರ ಗ್ರಂಥಾಲಯ ಕಚೇರಿಗೆ ಅಥವಾ
ಮುಖ್ಯಾಧಿಕಾರಿಗಳು ಪಟ್ಟಣ ಪಂಚಾಯತ್ ಮೊಳಕಾಲ್ಮೂರು ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ