ಮೆಟ್ರಿಕ್ ನಂತರ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ.
1 min read
ಚಿತ್ರದುರ್ಗ,ಫೆಬ್ರುವರಿ03:
ಹಿರಿಯೂರು ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ 4 ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ಹಾಗೂ 2 ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಫೆಬ್ರುವರಿ 10 ಕೊನೆಯ ದಿನವಾಗಿದೆ.
2020-21ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಆನ್‍ಲೈನ್ ಮೂಲಕ ಇಲಾಖಾ ವೆಬ್‍ಸೈಟ್ https://karepass.cgg.gov.in ನಲ್ಲಿ ಸಲ್ಲಿಸಲು ಫೆಬ್ರುವರಿ 10 ಕೊನೆಯ ದಿನವಾಗಿರುತ್ತದೆ.
ವಿದ್ಯಾರ್ಥಿ ನಿಲಯದ ಹೆಸರು: ಡಿ.ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ಹರಿಶ್ಚಂದ್ರಘಾಟ್ ಹಿರಿಯೂರು, ಡಿ.ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ಹರಿಶ್ಚಂದ್ರಘಾಟ್ ಹಿರಿಯೂರು, ಡಿ.ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ಹರಿಯಬ್ಬೆ ಹಿರಿಯೂರು ತಾಲ್ಲೂಕು, ಡಿ.ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ಯಲ್ಲದಕೆರೆ ಹಿರಿಯೂರು ತಾಲ್ಲೂಕು, ಡಿ.ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ಬಿ.ಎಲ್.ಗೌಡ ನಗರ ಹಿರಿಯೂರು ಟೌನ್, ಡಿ.ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ಕೆ.ಎಂ.ಕೊಟ್ಟೆಗೆ ಹಿರಿಯೂರು ಟೌನ್ ಈ ವಿದ್ಯಾರ್ಥಿ ನಿಲಯಗಳಲ್ಲಿ ತಲಾ 100 ವಿದ್ಯಾರ್ಥಿಗಳಿಗೆ ಮಂಜೂರಾತಿ ನೀಡಿ ಪ್ರವೇಶಾತಿ ಕಲ್ಪಿಸಲಾಗುವುದು ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.