ರಾಷ್ಟ್ರೀಯ ಯುವ ಸ್ವಯಂ ಸೇವಕರ ನೇಮಕಾತಿಗೆ ಯುವಕ, ಯುವತಿಯರಿಂದ ಅರ್ಜಿ ಆಹ್ವಾನ..
1 min readಯುವಕ, ಯುವತಿಯರಿಗೆ ಗುಡ್ ನ್ಯೂಸ್, ರಾಷ್ಟ್ರೀಯ ಯುವ ಸ್ವಯಂ ಸೇವಕರ ನೇಮಕಾತಿಗಾಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನ…
ಚಿತ್ರದುರ್ಗ:
ಜಿಲ್ಲಾ ನೆಹರು ಯುವ ಕೇಂದ್ರದ ವತಿಯಿಂದ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 6 ತಾಲ್ಲೂಕುಗಳಿಂದ 12 ಜನ ಹಾಗೂ ಕಚೇರಿಯ ಕಂಪ್ಯೂಟರ್‍ನಲ್ಲಿ ಕಾರ್ಯನಿರ್ವಹಿಸಲು 02 ಜನ ಸೇರಿದಂತೆ 14 ಜನ ಯುವಕ, ಯುವತಿಯರನ್ನು ರಾಷ್ಟ್ರೀಯ ಯುವ ಸ್ವಯಂ ಸೇವಕರನ್ನು” ನೇಮಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರುವರಿ 20 ಕೊನೆಯ ದಿನವಾಗಿದೆ.
ಭಾರತ ಸರ್ಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯವು ಯುವಕ, ಯುವತಿಯರಿಗಾಗಿ “ರಾಷ್ಟ್ರೀಯ ಯುವ ಸ್ವಯಂ ಸೇವಕರು ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಿದೆ. ಪ್ರಸ್ತುತ ಸಾಲಿನಲ್ಲಿಯೂ ಈ ಯೊಜನೆ ಮುಂದುವರೆಯಲಿದೆ. ಯೋಜನೆಯ ಉದ್ದೇಶ ಯುವಜನರನ್ನು ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವುದು ಇದರ.ಇದರ ಅನ್ವಯ ದೇಶದಾದ್ಯಂತ ಹದಿಮೂರು ಸಾವಿರ ಯುವಜನರನ್ನು “ರಾಷ್ಟ್ರೀಯ ಯುವ ಸ್ವಯಂ ಸೇವಕರನ್ನು ಪೂರ್ಣ ಪ್ರಮಾಣದಲ್ಲಿ ಒಂದು ವರ್ಷದ ಅವಧಿಗೆ ನಿಯೋಜಿಸಿಕೊಳ್ಳಲಾಗುತ್ತಿದೆ. ಆಯ್ಕೆಯಾದವರಿಗೆ ರೂ.5000/- ಗೌರವ ಧನ ಜೊತೆಗೆ ವಿಶೇಷ ತರಬೇತಿ ನೀಡಲಾಗುವುದು.
ನಿಬಂಧನೆಗಳು: ಅರ್ಜಿ ಸಲ್ಲಿಸುವವರು ಕನಿಷ್ಟ 18 ವರ್ಷದಿಂದ ಗರಿಷ್ಟ 29 ವರ್ಷದ ವ್ಯಾಪ್ತಿಯೊಳಗಿರಬೇಕು. ಕನಿಷ್ಟ ವಿದ್ಯಾರ್ಹತೆ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿದವರಾಗಿರಬೇಕು. ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳು ಯಾವುದೇ ಕಾರಣದಿಂದಲೂ ಅರ್ಜಿ ಸಲ್ಲಿಸಲು ಅರ್ಹರಲ್ಲ. ಈಗಾಗಲೇ ರಾಷ್ಟ್ರೀಯ ಸ್ವಯಂ ಸೇವಕರಾಗಿ ಹಿಂದಿನ ಯೋಜನೆಗಳಲ್ಲಿ ಸೇವೆ ಸಲ್ಲಿಸುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ. ಯುವಕ, ಯುವತಿ, ಮಹಿಳಾ ಮಂಡಳಿಯಲ್ಲಿ ಸೇವೆ ಸಲ್ಲಿಸಿರುವವರಿಗೆ ಆಯ್ಕೆಯಲ್ಲಿ ಆದ್ಯತೆ ನೀಡಲಾಗುವುದು. ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಎನ್‍ಸಿಸಿಯಲ್ಲಿ ಪಾಲ್ಗೊಂಡಿರುವವರಿಗೆ ಆದ್ಯತೆಇದೆ. ನಿಯಮಾನುಸಾರ ಯುವತಿಯರಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ಇದೆ. ಕಂಪ್ಯೂಟರ್ ಜ್ಞಾನ ಹೊಂದಿರುವವರಿಗೆ ವಿಶೇಷ ಆದ್ಯತೆ ಇದೆ. ರಾಷ್ಟ್ರೀಯ ಯುವ ಸ್ವಯಂ ಸೇವಕರ ಅವಧಿ ಒಂದು ವರ್ಷಗಳು ಮಾತ್ರ, ರಾಷ್ಟ್ರೀಯ ಯುವ ಸ್ವಯಂ ಸೇವಕರಾಗಿ ಆಯ್ಕೆಯಾದವರಿಗೆ ಮಾಹೆಯಾನ ರೂ.ಐದು ಸಾವಿರ ಗೌರವಧನ ನೀಡಲಾಗುವುದು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ಆಯ್ಕೆ ಸಮಿತಿಯು ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳ ಸಂದರ್ಶನವನ್ನು ನಡೆಸಿ ಆಯ್ಕೆಯನ್ನು ಘೋಷಿಸಲಿದೆ. ಆಯ್ಕೆಯಾದ ಅಭ್ಯರ್ಥಿಗಳು ಪೂರ್ಣ ಪ್ರಮಾಣದಲ್ಲಿ ಸೇವೆ ಸಲ್ಲಿಸಲು ಸಿದ್ದರಿರಬೇಕು.
ಈ ನಿಬಂಧನೆಗಳಿಗೆ ಒಳಪಟ್ಟು ಅರ್ಜಿ ಸಲ್ಲಿಸಲು ಇಚ್ಚಿಸುವ ಯುವಕ, ಯುವತಿಯರು ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲಾ ಯುವಜನ ಸಮನ್ವಯಾಧಿಕಾರಿ, ನೆಹರು ಯುವ ಕೇಂದ್ರ, ನಗರಾಭಿವೃದ್ಧಿ ಕಚೇರಿ ಆವರಣ, ಚಿತ್ರದುರ್ಗ-577501 ಇವರಿಂದ ಕಾರ್ಯಾಲಯದ ಕೆಲಸದ ವೇಳೆಯಲ್ಲಿ ಪಡೆದು ಅಥವಾ ಮಾಡಿಕೊಂಡು ಫೆಬ್ರುವರಿ 20ರ ಸಂಜೆ 5 ಗಂಟೆಯ ಒಳಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಿದೆ. ಹೆಚ್ಚಿನ ವಿವರಗಳಿಗೆ 08194-222008 ದೂರವಾಣಿ ಸಂಪರ್ಕಿಸಬಹುದು ಎಂದು ಜಿಲ್ಲಾ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎನ್.ಸುಹಾಸ್ ತಿಳಿಸಿದ್ದಾರೆ.