March 3, 2024

Chitradurga hoysala

Kannada news portal

ಕೋವಿಡ್ ಲಸಿಕೆ ಪಡೆದ ಡಿಸಿ, ಎಸ್‍ಪಿ, ಸಿಇಒ
ಜಿಲ್ಲೆಯಲ್ಲಿ ಎರಡನೇ ಹಂತದ ಕೋವಿಡ್-19 ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ.

1 min read

ಚಿತ್ರದುರ್ಗ,ಫೆಬ್ರವರಿ08:
ಚಿತ್ರದುರ್ಗ ಸೇರಿದಂತೆ ಜಿಲ್ಲೆಯ 17 ಕಡೆಗಳಲ್ಲಿ ಎರಡನೇ ಹಂತದ ಕೊರೊನಾ ರೋಗ ನಿರೋಧಕ ಲಸಿಕೆ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು.  
  ನಗರದ ಜಿಲ್ಲಾಸ್ಪತ್ರೆ ಆವರಣದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತರಬೇತಿ ಸಂಸ್ಥೆ, ಸಿರಿಗೆರೆ ಸಿಸಿಪಿ, ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರ್ರ ಹಾಗೂ ಚಳ್ಳಕೆರೆ ತಾಲ್ಲೂಕಿನ ತಾಲ್ಲೂಕು ಆಸ್ಪತ್ರೆ, ನಾಯಕನಹಟ್ಟಿ ಸಮುದಾಯ ಆರೋಗ್ಯ ಕೇಂದ್ರ, ಪರಶುರಾಮಪುರ ಸಮುದಾಯ ಆರೋಗ್ಯ ಕೇಂದ್ರ, ಹಿರಿಯೂರು ತಾಲ್ಲೂಕಿನ ತಾಲ್ಲೂಕು ಆಸ್ಪತ್ರೆ, ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರ, ಮರಡಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರ, ಹೊಳಲ್ಕೆರೆ ತಾಲ್ಲೂಕಿನ ಬಿ.ದುರ್ಗ ಸಮುದಾಯ ಆರೋಗ್ಯ ಕೇಂದ್ರ, ಹೊಳಲ್ಕೆರೆ ತಾಲ್ಲೂಕು ಆಸ್ಪತ್ರೆ, ಹೊಸದುರ್ಗ ತಾಲ್ಲೂಕಿನ ತಾಲ್ಲೂಕು ಆಸ್ಪತ್ರೆ, ಕೆ.ಕೆ.ಪುರ ಸಮುದಾಯ ಆರೋಗ್ಯ ಕೇಂದ್ರ-1, ಶ್ರೀರಾಂಪುರ ಸಮುದಾಯ ಆರೋಗ್ಯ ಕೇಂದ್ರ, ಮೊಳಕಾಲ್ಮೂರು ತಾಲ್ಲೂಕಿನ ಸರ್ಕಾರಿ ತಾಲ್ಲೂಕು ಆಸ್ಪತ್ರೆ, ರಾಂಪುರ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಹಾಕಲಾಯಿತು.
ಕೋವಿಡ್ ಲಸಿಕೆ ಪಡೆದ ಡಿಸಿ, ಎಸ್‍ಪಿ, ಸಿಇಒ:  ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತರಬೇತಿ ಸಂಸ್ಥೆಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಎರಡನೇ ಹಂತದ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.    ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ ಕೋವಿಡ್-19 ಲಸಿಕೆ ಪಡೆದರು.
 ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಕೋವಿಡ್-19 ಲಸಿಕೆ ತುಂಬಾ ಸೇಫ್ ಆಗಿದೆ, ಯಾವುದೇ ಭಯ, ಆತಂಕವಿಲ್ಲದೇ ಕೋವಿಡ್ ಲಸಿಕೆ ಪಡೆಯುವಂತೆ ತಿಳಿಸಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಎರಡನೇ ಹಂತದ ಕೋವಿಡ್ ಲಸಿಕಾ  ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.
 ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇದರ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ಸೇರಿದಂತೆ ಸೇರಿದಂತೆ ಒಟ್ಟು 2514 ಮಂದಿ ವಾರಿಯರ್ಸ್‍ಗೆ ಸೋಮವಾರ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ.  
  ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ನಗರಸಭೆ ಆಯುಕ್ತ ಜೆ.ಟಿ.ಹನಮಂತರಾಜು, ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹೆಚ್.ಸಿ.ಬಸವರಾಜಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದರು.
 ಫೋಟೋ ವಿವರ: ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಆವರಣದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತರಬೇತಿ ಸಂಸ್ಥೆಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಎರಡನೇ ಹಂತದ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿ.ಪಂ ಸಿಇಒ ಡಾ.ಕೆ.ನಂದಿನಿದೇವಿ ಇದ್ದರು.
=======

About The Author

Leave a Reply

Your email address will not be published. Required fields are marked *