ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
1 min readಚಿತ್ರದುರ್ಗ,ಫೆಬ್ರುವರಿ16:
2020-21ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಮಾರ್ಚ್ 15 ಕೊನೆಯ ದಿನವಾಗಿದೆ.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮತ್ತು ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ನವೀನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ನವೀನ ಮತ್ತು ನವೀಕರಣ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ಪೋರ್ಟ್‍ಲ್ ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರುವರಿ 15ರಿಂದ ಮಾರ್ಚ್ 15ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಚಳ್ಳಕೆರೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.