ಜಿಲ್ಲಾ ಪೊಲೀಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜನೆ.
1 min readಜಿಲ್ಲಾ ಪೊಲೀಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜನೆ
ಚಿತ್ರದುರ್ಗ,ಫೆಬ್ರುವರಿ16:
ಚಿತ್ರದುರ್ಗ ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾಗಿರುವ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಅಥವಾ ಸಿಬ್ಬಂದಿಗಳ ತಂಡಗಳನ್ನು ಸೇರ್ಪಡೆಗೊಳಿಸಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ.
ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಸಲುವಾಗಿ ತಮ್ಮ ಇಲಾಖೆ ವತಿಯಿಂದ ಸರ್ಕಾರಿ ಅಧಿಕಾರಿ ಅಥವಾ ಸಿಬ್ಬಂದಿಯವರನ್ನು ಒಳಗೊಂಡಂತೆ ಒಂದು ತಂಡವನ್ನು ರಚಿಸಿ, ತಂಡದ ವಿವರವನ್ನು ಕಚೇರಿಗೆ ಕಳುಹಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಕೋಟೆ ಪೊಲೀಸ್ ಠಾಣೆಯ ಪಿಎಸ್‍ಐ ಗಾದಿಲಿಂಗಪ್ಪ (ದೂ.ಸಂ.78920755000), ಎಎಸ್‍ಐ ಜಿ.ಎಸ್.ವೆಂಕಟಾಚಲ (ದೂ.ಸಂ. 8971618510) ಗೆ ಸಂಪರ್ಕಿಸಬಹುದು ಎಂದು ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.