ಉದ್ಯೋಗ ವಾರ್ತೆ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಅರ್ಜಿ ಆಹ್ವಾನ
1 min readಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
ಚಿತ್ರದುರ್ಗ,ಫೆಬ್ರವರಿ18:
ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ನಾಲ್ಕು ತಾಲ್ಲೂಕುಗಳ 21 ಗ್ರಾಮ ಪಂಚಾಯಿತಿಗಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ 18 ರಿಂದ 45 ವರ್ಷ ವಯೊಮಾನದೊಳಗಿರುವ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 1 ಕೊನೆಯ ದಿನವಾಗಿದೆ.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಮಾಸಿಕ ರೂ. 6000/-ಗಳ ಗೌರವಧನ ನೀಡಲಾಗುವುದು. ಎಸ್‍ಎಸ್‍ಎಲ್‍ಸಿ ಉತ್ತೀರ್ಣ, ಅನುತೀರ್ಣರಾದ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಆಯಾ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ತಾಲ್ಲೂಕಿನ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರಲ್ಲಿ ಸಲ್ಲಿಸಬಹುದಾಗಿದೆ.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಖಾಲಿ ಇರುವ ತಾಲ್ಲೂಕುಗಳು ಮತ್ತು ಗ್ರಾಮ ಪಂಚಾಯಿತಿ ವಿವರ ಇಂತಿವೆ: ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬೆನ್ನೂರು, ಬ್ಯಾಲಹಾಳ್, ಗೊಡಬನಹಾಳ್, ಇಸ್ಸಾಮುದ್ರ ಮತ್ತು ತುರುವನೂರು ಗ್ರಾಮ ಪಂಚಾಯಿತಿಗಳು. ಚಳ್ಳಕೆರೆ ತಾಲ್ಲೂಕಿನ ಟಿ.ಎನ್. ಕೋಟೆ, ಎನ್. ದೇವರಹಳ್ಳಿ, ಕಾಲುವೇಹಳ್ಳಿ, ಫಟಪರ್ತಿ ರೇಣುಕಾಪುರ, ಹಾಗೂ ನಗರಂಗೆರೆ ಗ್ರಾಮ ಪಂಚಾಯಿತಿಗಳಲ್ಲಿ. ಹಿರಿಯೂರು ತಾಲ್ಲೂಕಿನ ಕಸ್ತೂರಿ ರಂಗಪ್ಪನಹಳ್ಳಿ, ಹರ್ತಿಕೋಟೆ, ಕಣಜನಹಳ್ಳಿ, ಬ್ಯಾಡರಹಳ್ಳಿ, ವಾಣಿ ವಿಲಾಸಪುರ, ಆದಿವಾಲ, ಯರಬಳ್ಳಿ ಮತ್ತು ರಂಗನಾಥಪುರ ಗ್ರಾಮ ಪಂಚಾಯಿತಿಗಳಲ್ಲಿ. ಹಾಗೂ ಮೊಳಕಾಲ್ಮೂರು ತಾಲ್ಲೂಕಿನ ಜೆ.ಬಿ.ಹಳ್ಳಿ, ಮತ್ತು ಕೋನಸಾಗರ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ ಖಾಲಿ ಇವೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಚಿತ್ರದುರ್ಗ. ದೂರವಾಣಿ 08194-235284/86ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.