May 23, 2024

Chitradurga hoysala

Kannada news portal

ಹಿರಿಯರಿಗೆ ಗುಡ್ ನ್ಯೂಸ್. ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ..

1 min read

ಚಿತ್ರದುರ್ಗ,ಫೆಬ್ರವರಿ19:
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ರವರು ಪ್ರಸಕ್ತ ಸಾಲಿನಲ್ಲಿ ಹಿರಿಯ ನಾಗರಿಕ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಹಿರಿಯ ನಾಗರಿಕರು, ಸಂಸ್ಥೆಗಳಿಂದ ವಯೋಶ್ರೇಷ್ಠ ಸಮ್ಮಾನ್-2021 ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಮಾರ್ಚ್ 1 ಕೊನೆಯ ದಿನವಾಗಿದೆ.
ಜಿಲ್ಲೆಯಲ್ಲಿ ಹಿರಿಯ ನಾಗರಿಕ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಆರ್ಹ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳು ವಯೋಶ್ರೇಷ್ಠ ಸಮ್ಮಾನ್-2021 ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಹುದು.
ಆಸಕ್ತರು ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಆಂಗ್ಲಭಾಷೆಯಲ್ಲಿ ಭರ್ತಿಮಾಡಿ ಮಾರ್ಚ್ 1 ರೊಳಗಾಗಿ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ತ್ರಿ ಪ್ರತಿಯಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್: http://socialijustice.nic.in  ಹಾಗೂ ವಿಕಲಚೇತನ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಕಚೇರಿ ಚಿತ್ರದುರ್ಗ. ದೂರವಾಣಿ;08194-235284/86ಗೆ ಸಂಪರ್ಕಿಸಬಹುದು ಎಂದು  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *