ದಾವಣಗೆರೆ ಮೇಯರ್ ಚುನಾವಣೆಗೆ ಇಬ್ಬರು ಎಂಎಲ್ಸಿ ಗಳು ಮತ ಹಾಕಬಹುದು..
1 min readದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆಯ ಮತದಾರರ ಪಟ್ಟಿಗೆ ಸಚಿವ ಆರ್.ಶಂಕರ್ ಮತ್ತು ವಿಧಾನಪರಿಷತ್ ಸದಸ್ಯ ಚಿದಾನಂದಗೌಡ ಅವರ ಹೆಸರು ಸೇರ್ಪಡೆ ಪ್ರಶ್ನಿಸಿ ಕಾಂಗ್ರೆಸ್‌ನ ಪಾಲಿಕೆಯ ಕೆಲ ಸದಸ್ಯರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ.
ಮತದಾತರ ಪಟ್ಟಿಯಲ್ಲಿ ಎಂ.ಎಲ್.ಸಿ ಗಳ ಹೆಸರನ್ನು ಅಕ್ರಮವಾಗಿ ಸೇರ್ಪಡೆಗೊಳಿಸಲಾಗಿದೆ ಎಂಬ ಕಾಂಗ್ರೆಸ್ ಆರೋಪಿಸಿದ್ದರು ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು ಆದರೆ ಕೋರ್ಟ್ ಅರ್ಜಿ ವಜಾ ಮಾಡಿ ವಿಧಾನ ಪರಿಷತ್ ಸದಸ್ಯರು ಮುಂಬರುವ ಮೇಯರ್ ಉಪ ಮೇಯರ್ ಚುನಾವಣೆಗೆ ಮತ ಹಾಕಲು ಅವಕಾಶ ನೀಡಿರುವುದು ಸಂವಿಧಾನಿಕವಾಗಿದೆ ಎಂಬುದನ್ನು ಮಾನ್ಯ ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ ಎಂದು ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಸನ್ನಕುಮಾರ್ ತಿಳಿಸಿದ್ದಾರೆ.
ಈ ಬಾರಿಯು ಸಹ ಪಾಲಿಕೆಯಲ್ಲಿ ಮತ್ತೊಮ್ಮೆ ಭಾಜಪ ಅಧಿಕಾರ ಹಿಡಿಯಲಿದೆ ಎಂಬ ವಿಶ್ವಾಸ ಧೃಡವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.