ದೇವರ ಬಗ್ಗೆ ನಮಗೂ ಭಕ್ತಿ ಇದೆ. ರಾಮಮಂದಿರ ಹಣ ಲೆಕ್ಕ ಕೇಳುವುದರಲ್ಲಿ ತಪ್ಪೇನಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ.
1 min readದೇಶದ ಜನರ ಭಾವನೆಗಳಿಗೆ ಬಿಜೆಪಿ ನಾಯಕರು ಅನ್ಯಾಯ ಮಾಡುತ್ತಿದ್ದಾರೆ, ದೇಶದ ಒಬ್ಬ ಸಾಮಾನ್ಯ ನಾಗರೀಕನಾಗಿ ರಾಮಮಂದಿರ ನಿರ್ಮಾಣಕ್ಕೆ ಸಂಗ್ರಹ ಮಾಡಿದ್ದ ಹಣದ ಲೆಕ್ಕ ಕೊಡಿ ಅಂತ ಕೇಳಿದ್ದೇನೆ. ಸಾರ್ವಜನಿಕರ ಹಣದ ಲೆಕ್ಕ ಕೇಳೋದ್ರಲ್ಲಿ ತಪ್ಪೇನಿದೆ? ಲೆಕ್ಕ ಕೊಡೋದು ಹಣ ಸಂಗ್ರಹಿಸಿದವರ ಕರ್ತವ್ಯ ಅಲ್ಲವೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ನಮ್ಮೂರಿನಲ್ಲಿ ನಾನು ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದೇನೆ. ದೇವರ ಬಗ್ಗೆ ನಮಗೂ ಭಕ್ತಿ ಇದೆ, ನಮ್ಮ ಶ್ರದ್ಧೆ, ನಂಬಿಕೆಗಳು ವೈಯಕ್ತಿಕ ವಿಚಾರಗಳಾಗಿರಬೇಕೇ ಹೊರತು ರಾಜಕೀಯ ಅಸ್ತ್ರಗಳಾಗಬಾರದು. ರಾಮ ಮಂದಿರ ನಿರ್ಮಾಣ ವಿಷಯದಲ್ಲಿ ಬಿಜೆಪಿ ನಾಯಕರು ರಾಜಕೀಯ ಲಾಭ ಪಡೆಯಲು ಹೊರಟಿರುವುದು ನಾಚಿಕೆಗೇಡು ಎಂದು ಅವರು ಹೇಳಿದ್ದಾರೆ.