ನಾಳೆ ಚಿತ್ರದುರ್ಗ ವಲಯ ಥ್ರೋಬಾಲ್ ಪಂದ್ಯಾವಳಿ
1 min read
ಚಿತ್ರದುರ್ಗ,ಫೆಬ್ರವರಿ22:
ಕಾಲೇಜು ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ವತಿಯಿಂದ ದಾವಣಗೆರೆ ವಿಶ್ವ ವಿದ್ಯಾನಿಲಯ ಅಂತರ ಕಾಲೇಜು ಚಿತ್ರದುರ್ಗ ವಲಯ ಪುರುಷರ ಮತ್ತು ಮಹಿಳೆಯರ ಥ್ರೋಬಾಲ್ ಪಂದ್ಯಾವಳಿಯನ್ನು ಫೆ.23ರಂದು ಬೆಳಿಗ್ಗೆ 10ಕ್ಕೆ ನಗರದ ಸರ್ಕಾರಿ ಕಲಾ ಕಾಲೇಜು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಕಾರ್ಯಕ್ರಮ ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲ ಟಿ.ಎಲ್. ಸುಧಾಕರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿವಿ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಕಾರ್ಯದರ್ಶಿ ಪ್ರೊ.ಹೆಚ್.ತಿಪ್ಪೇಸ್ವಾಮಿ ಭಾಗವಹಿಸುವರು.
ಸಮಾರೋಪ ಸಮಾರಂಭ: ನಗರದ ಸರ್ಕಾರಿ ಕಲಾ ಕಾಲೇಜು ಕ್ರೀಡಾಂಗಣದಲ್ಲಿ ಫೆಬ್ರವರಿ 23ರಂದು ಸಂಜೆ 4ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ.ಆರ್.ಕೆ. ರಂಗಸ್ವಾಮಿ ಬಹುಮಾನ ವಿತರಣೆ ಮಾಡುವರು. ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಟಿ.ಎಲ್.ಸುಧಾಕರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿವಿ ದೈಹಿಕ ಶಿಕ್ಷಣ ನಿರ್ದೇಶಕೆರ ಸಂಘದ ಅಧ್ಯಕ್ಷ ಪ್ರೊ.ಮಕ್ಸೂದ್ ಅಹಮ್ಮದ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ