ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
1 min read
ಚಿತ್ರದುರ್ಗ,ಫೆಬ್ರವರಿ22:
ಬೆಂಗಳೂರಿನ ಹೆಚ್‍ಎಎಲ್‍ನಲ್ಲಿ (ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್)ಡಿಪ್ಲೊಮೊ ಇನ್ ಏರೋನ್ಯಾಟಿಕಲ್ಸ್. ಮೆಕಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್, ಎಲೆಕ್ಟ್ರಾನಿಕ್ ಮತ್ತು ಕಮ್ಯೂನಿಕೇಷನ್, ಸಿವಿಲ್, ಕಂಪ್ಯೂಟರ್ ಸೈನ್ಸ್, ಇನ್ಫೋರಮೇಷನ್ ಸೈನ್ಸ್, ಮೇಟಾರ್ಜಿ, ಕಮರ್ಷಿಯಲ್ ಪ್ರಾಕ್ಟಿಸ್ ಇಂಜಿನಿಯರಿಂಗ್ ಕಮ್ಯೂನಿಕೇಷನ್ ಕೋರ್ಸ್‍ಗಳಿಗೆ ಸಂಬಂಧಪಟ್ಟ ಫುಲ್ ಟರ್ಮ್ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 9 ಕೊನೆಯ ದಿನವಾಗಿದೆ.
ವಿದ್ಯಾರ್ಹತೆ : ಎಸ್‍ಎಸ್‍ಎಲ್‍ಸಿ ಮತ್ತು ಡಿಪ್ಲೋಮನಲ್ಲಿ ಉತ್ತೀರ್ಣರಾಗಿರಬೇಕು.
ಅಗತ್ಯ ದಾಖಲೆಗಳಾದ ಎಸ್.ಎಸ್.ಎಲ್.ಸಿ ಅಂಕಪಟ್ಪಿ,ಡಿಪ್ಲೋಮ ಅಂಕಪಟ್ಟಿ, ಜಾತಿಪ್ರಮಾಣ ಪತ್ರ, ಆಧಾರ್ ಕಾರ್ಡ್ ಜೆರಾಕ್ಸ್‍ಗಳೊಂದಿಗೆ ಅರ್ಜಿಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಚಿತ್ರದುರ್ಗ ಹಾಗೂ ದೂರವಾಣಿ ಸಂಖ್ಯೆ 08194-230485, 9945587060, 7022459064ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.