ಮೆಡಿಕಲ್ ಕಾಲೇಜ್ ವಾಪಸ್ಸು ಪಡೆದಿರುವುದು ವಿರೋಧಿಸಿ ಪ್ರತಿಭಟನೆ..
1 min readಚಿತ್ರದುರ್ಗ, ಫೆ.೨೩:
ಜಿಲ್ಲೆಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಿ, ಪುನಃ ವಾಪಸ್ಸು ಪಡೆದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯವರು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸುಮಾರು ೨೦ ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಚಿತ್ರದುರ್ಗ ಜಿಲ್ಲೆಯು ಸಾಕಷ್ಟು ಹಿಂದುಳಿದಿದ್ದು, ಜನರು ಖಾಯಿಲೆಗಳು ಬಂದರೆ ದೂರದ ಬೇರೆ ಜಿಲ್ಲೆಗಳಿಗೆ ಹೋಗುವ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಜಿಲ್ಲೆಗೆ ಮೆಡಿಕಲ್ ಕಾಲೇಜು ಮಂಜೂರು ಆದೇಶ ಮಾಡಿ, ೫೦ ಲಕ್ಷ ರೂ.ಗಳನ್ನು ಮಂಜೂರು ಮಾಡಿ, ಸ್ಥಳ ಪರಿಶೀಲನೆ ಮಾಡಿ ನಂತರ ಈ ಸಾಲಿನ ಮೆಡಿಕಲ್ ಕಾಲೇಜು ಅಗುವುದಿಲ್ಲ ಎಂದು ಹೇಳುವುದು ಎಷ್ಟು ಸರಿ, ಇದು ಇಲ್ಲಿನ ಮುಗ್ದ ಜನರ ಕನಸ್ಸಿಗೆ ಮಣ್ಣೆರಚುವ ಕೆಲಸ ಮಾಡಿದಂತಾಗಿದೆ ಎಂದು ದೂರಿರುವ ಪ್ರತಿಭಟನಾಕಾರರು ಈ ಸಾಲಿನ ಬಜೆಟ್ ನಲ್ಲಿ ಮೆಡಿಕಲ್ ಕಾಲೇಜಿಗೆ ಹಣವನ್ನು ಮೀಸಲಿಟ್ಟು ಕೂಡಲೇ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯ ನೇತೃತ್ವವನ್ನು ಸೇನೆಯ ಜಿಲ್ಲಾಧ್ಯಕ್ಷ ಕೆ.ರಾಮಚಂದ್ರ ವಹಿಸಿದ್ದರು.