ಫೆ.25 ಕ್ಕೆ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿಯ ಜಾತ್ರೆ ಪೂರ್ವ ಸಿದ್ದತೆ ಸಭೆ.
1 min read
ಚಿತ್ರದುರ್ಗ,ಫೆಬ್ರುವರಿ23:
ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಪಟ್ಟಣದ ಶ್ರೀಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ 2021ನೇ ಸಾಲಿನ ಜಾತ್ರೆಯ ಪೂರ್ವಸಿದ್ಧತೆ ಸಭೆಯನ್ನು ಫೆಬ್ರವರಿ 25ರ ಸಂಜೆ 4 ಗಂಟೆಗೆ ಶ್ರೀಗುರುತಿಪ್ಪೇರುದ್ರಸ್ವಾಮಿ ಒಳಮಠ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ ತಿಳಿಸಿದ್ದಾರೆ.