ಫೆ.25ರಂದು ವಿಧಾನ ಪರಿಷತ್ ಸಭಾಪತಿಗಳ ಜಿಲ್ಲಾ ಪ್ರವಾಸ.
1 min readಚಿತ್ರದುರ್ಗ,ಫೆಬ್ರವರಿ23:
ರಾಜ್ಯ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಫೆಬ್ರುವರಿ 25 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಭಾಪತಿಗಳು ಅಂದು ಬೆಳಿಗ್ಗೆ 6.30ಕ್ಕೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 9.00 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಿ, ಚಿತ್ರದುರ್ಗದ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಏರ್ಪಡಿಸಿರುವ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಬೆಳಿಗ್ಗೆ 11.30ಕ್ಕೆ ರಸ್ತೆ ಮಾರ್ಗವಾಗಿ ದಾವಣಗೆರೆಗೆ ಪ್ರಯಾಣ ಬೆಳೆಸುವರು ಎಂದು ಸಭಾಪತಿಯವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
========