May 5, 2024

Chitradurga hoysala

Kannada news portal

ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಹೊರಟ್ಟಿ

1 min read

ಬೆಂಗಳೂರು, (ಫೆ.24): ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಸಭಾಪತಿಯಾಗಿ ಅಧಿಕಾರ ವಹಿಸಿಕೊಂಡಿರುವ ಕಾರಣ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರಿಗೆ (ಮಂಗಳವಾರ) ರಾಜೀನಾಮೆ ಪತ್ರ ಕಳುಹಿಸಿದ್ದಾರೆ.

ಫೆಬ್ರವರಿ 9ರಂದು ನಡೆದ ಪರಿಷತ್ ಸಭಾಪತಿ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಭಾಗಿಯಾಗಿರಲಿಲ್ಲ.  ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಬಿಜೆಪಿ ಬೆಂಬಲದೊಂದಿಗೆ ಅವಿರೋಧವಾಗಿ ಸಭಾಪತಿಯಾಗಿ ಆಯ್ಕೆಯಾಗಿದ್ದರು.

About The Author

Leave a Reply

Your email address will not be published. Required fields are marked *