May 2, 2024

Chitradurga hoysala

Kannada news portal

ಸೋಲು-ಗೆಲವು ಸಮಾನವಾಗಿ ಸ್ವೀಕರಿಸಿ: ಡಾ.ಹೆಚ್.ಗುಡ್ಡದೇಶ್ವರಪ್ಪ

1 min read

ಅಂತರ ವಲಯ ಪುರುಷ ಮತ್ತು ಮಹಿಳೆಯರ ಥ್ರೋಬಾಲ್ ಪಂದ್ಯಾವಳಿ
ಸೋಲು-ಗೆಲವು ಸಮಾನವಾಗಿ ಸ್ವೀಕರಿಸಿ: ಡಾ.ಹೆಚ್.ಗುಡ್ಡದೇಶ್ವರಪ್ಪ
***
ಚಿತ್ರದುರ್ಗ,ಫೆಬ್ರವರಿ24:
ಕ್ರೀಡೆಯಲ್ಲಿ ಸ್ಪರ್ಧೆ ಬಹಳ ಮುಖ್ಯವಾಗಿದೆ. ಆದರೆ ಕ್ರೀಡೆಯಲ್ಲಿ ಭಾಗವಹಿಸಿದವರು ಸೋಲು-ಗೆಲುವುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಸರ್ಕಾರಿ ಕಲಾ ಕಾಲೇಜು(ಸ್ವಾಯತ್ತ) ಕ್ರೀಡಾ ಸಮಿತಿಯ ಸಂಚಾಲಕ ಡಾ. ಹೆಚ್.ಗುಡ್ಡದೇಶ್ವರಪ್ಪ ಸಲಹೆ ನೀಡಿದರು.
 ನಗರದ ಸರ್ಕಾರಿ ಕಲಾ ಕಾಲೇಜು ಕ್ರೀಡಾಂಗಣದಲ್ಲಿ ಬುಧವಾರ ಕಾಲೇಜು ಶಿಕ್ಷಣ ಇಲಾಖೆ ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ವತಿಯಿಂದ ಆಯೋಜಿಸಲಾಗಿದ್ದ ದಾವಣಗೆರೆ ವಿಶ್ವ ವಿದ್ಯಾನಿಲಯ ಅಂತರ ಕಾಲೇಜು ಅಂತರ ವಲಯ ಪುರುಷ ಮತ್ತು ಮಹಿಳೆಯರ ಥ್ರೋಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
 ಕ್ರೀಡಾಪಟುಗಳು ದೇಶದ ಉದಯೋನ್ಮುಖ ಪ್ರತಿಭೆಗಳಾಗಿದ್ದು, ನಿಮ್ಮಗಳ ಪ್ರತಿಭೆ ದೇಶಕ್ಕೆ ಅತ್ಯವಶ್ಯಕವಾಗಿದೆ. ಕ್ರೀಡಾಪಟುಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ದೇಶಕ್ಕಾಗಿ ಸಮರ್ಪಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
 ಸರ್ಕಾರಿ ಕಲಾ ಕಾಲೇಜಿನ (ಸ್ವಾಯತ್ತ) ಪ್ರಾಂಶುಪಾಲ ಪ್ರೊ.ಟಿ.ಎಲ್.ಸುಧಾಕರ್ ಮಾತನಾಡಿ,  ಕ್ರೀಡೆ, ಶಿಕ್ಷಣ ಹಾಗೂ ಜವಾಬ್ದಾರಿ ಸೇರಿದಂತೆ ಯಾವುದನ್ನೂ ತಾತ್ಸಾರ ಮನೋಭಾವದಿಂದ ನೋಡಬಾರದು. ತಾತ್ಸಾರ ಮನೋಭಾವದಿಂದ ನಾವು ಬೆಳವಣೆಗೆ ಹೊಂದಲು ಸಾಧ್ಯವಿಲ್ಲ ಎಂದರು.
ಕ್ರೀಡಾಪಟುಗಳು ಕ್ರೀಡಾ ಮನೋಭಾವ ಮನೋಭಾವದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ವಿದ್ಯಾಭ್ಯಾಸದ ಜೊತೆ ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಎಂದು ಸಲಹೆ ನೀಡಿದರು.
 ಕಾರ್ಯಕ್ರಮದಲ್ಲಿ ಸರ್ಕಾರಿ ಕಲಾ ಕಾಲೇಜಿನ (ಸ್ವಾಯತ್ತ) ಅಧ್ಯಾಪಕ ಕಾರ್ಯದರ್ಶಿ ಪ್ರೊ.ಎಲ್. ನಾಗರಾಜಪ್ಪ, ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ.ಎಂ.ಜೆ. ಸಾಧಿಕ್, ಭರಮಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ವೀರೇಂದ್ರ., ಪ್ರಾಧ್ಯಾಪಕ ಡಾ.ಎಸ್.ಆರ್. ಲೇಪಾಕ್ಷ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

About The Author

Leave a Reply

Your email address will not be published. Required fields are marked *