ಗುಡ್ ನ್ಯೂಸ್: ಅಂಬೇಡ್ಕರ್ ಅಭಿವೃದ್ಧಿ ನಿಗಮ: ತರಬೇತಿಗೆ ಅರ್ಜಿ ಆಹ್ವಾನ
1 min read
ಚಿತ್ರದುರ್ಗ,ಫೆಬ್ರುವರಿ24:
2020-21ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೌಶಲ್ಯ ತರಬೇತಿ ಯೋಜನೆಯಡಿ ಕಿಯೋನಿಕ್ಸ್ ಸಂಸ್ಥೆಯೊಂದಿಗೆ ಅಕೌಂಟೆಟ್ ಮತ್ತು ಟ್ಯಾಲಿ, ಕಂಪ್ಯೂಟರ್ ಪ್ರೋಗ್ರಾಮಿಂಗ್ ಕೋರ್ಸ್, ಕಾಲ್ ಸೆಂಟರ್ ಟ್ರೈನಿಂಗ್, ಕಂಪ್ಯೂಟರ್ ಪ್ಯಾಷನ್ ಡಿಸೈನಿಂಗ್ ತರಬೇತಿಗಳನ್ನು ನೀಡಲಾಗುವುದು.
ಅರ್ಹ ವಿದ್ಯಾವಂತ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆ ಪ್ರತಿಗಳೊಂದಿಗೆ, ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ಸತ್ರ ನ್ಯಾಯಾಲಯದ ಹತ್ತಿರ, ಚಿತ್ರದುರ್ಗ ಜಿಲ್ಲೆ-577501, ದೂರವಾಣಿ ಸಂಖ್ಯೆ 08194-231017ಗೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.