May 2, 2024

Chitradurga hoysala

Kannada news portal

ಜಿಲ್ಲೆಯಲ್ಲಿ 5 ಜನರಿಗೆ ಕೋವಿಡ್ ಸೋಂಕು ದೃಢ

1 min read


ಚಿತ್ರದುರ್ಗ,ಫೆಬ್ರುವರಿ24:
 ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 5 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,893ಕ್ಕೆ ಏರಿಕೆಯಾಗಿದೆ.
 ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 6 ಜನವರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬುಧವಾರ ಒಟ್ಟು 1483 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ಒಟ್ಟು 69 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 14,778 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 46 ಸಕ್ರಿಯ ಪ್ರಕರಣಗಳು ಇವೆ.
 ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,20,512 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
  ಈವರೆಗೆ 3,24,975 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,08,504 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 914 ಜನರ ವರದಿ ಬರುವುದು ಬಾಕಿ ಇದೆ. 664 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *