ಗುಡ್ ನ್ಯೂಸ್:ಮಾರ್ಚ್ 3ರಂದು ಉದ್ಯೋಗ ಮೇಳ
1 min readಮಾರ್ಚ್ 3ರಂದು ಉದ್ಯೋಗ ಮೇಳ
****
ಚಿತ್ರದುರ್ಗ, ಫೆಬ್ರವರಿ26:
ರಾಷ್ಟ್ರೀಯ ವೃತಿ ಸೇವಾ ಯೋಜನೆ (ಎನ್‍ಸಿಎಸ್‍ಪಿ) ಅಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಮೊಳಕಾಲ್ಮುರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಮಾರ್ಚ್ 03ರಂದು ಬೆಳಿಗ್ಗೆ 10 ರಿಂದ ಸಂಜೆ 4ರವರೆಗೆ ಮೊಳಕಾಲ್ಮೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಉದ್ಯೋಗ ಮೇಳದಲ್ಲಿ 15ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲು ಭಾಗವಹಿಸಲಿದ್ದಾರೆ. ಆಸಕ್ತರು ಅಗತ್ಯ ದಾಖಲೆಗಳಾದ ಬಯೊಡಾಟಾ ಎಂಟು ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಎರಡು ಭಾವಚಿತ್ರ ತರತಕ್ಕದು. ಸಂದರ್ಶದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಚಿತ್ರದುರ್ಗ ದೂರವಾಣಿ ಸಂಖ್ಯೆ 08194-230485, 7022459064, 8105619020, 8073037905ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.