April 26, 2024

Chitradurga hoysala

Kannada news portal

ಫೆ.28 ರಂದು ಎಫ್‍ಡಿಎ ಪರೀಕ್ಷೆ: ನಿಷೇಧಾಜ್ಞೆ ಜಾರಿ.

1 min read


ಚಿತ್ರದುರ್ಗ,ಫೆಬ್ರವರಿ26:
 ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಫೆಬ್ರವರಿ 28 ರಂದು ರಾಜ್ಯ ಸಿವಿಲ್ ಸೇವೆಯಡಿ ವಿವಿಧ ಇಲಾಖೆಗಳಲ್ಲಿ ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯ 41 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲಿ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ಪರೀಕ್ಷಾ ಕೇಂದ್ರದ  200 ಮೀಟರ್ ಸುತ್ತ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಆದೇಶಿಸಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನ 30, ಹಿರಿಯೂರು ತಾಲ್ಲೂಕಿನಲ್ಲಿ 05, ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿ 6 ಒಟ್ಟು 41  ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ ಹಾಗೂ ಕಂಪ್ಯೂಟರ್ ಇಂಟರ್ ನೆಟ್ ಕೇಂದ್ರಗಳನ್ನು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಮೊಬೈಲ್ ಪೋನ್‍ಗಳನ್ನು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.

About The Author

Leave a Reply

Your email address will not be published. Required fields are marked *