ಪಂಜಾಬ್ ನ್ಯಾಷನಲ್ ಬ್ಯಾಂಕ್ ವತಿಯಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ…
1 min readಚಿತ್ರದುರ್ಗ:
ಕೊರೊನಾ ವೈರಸ್ ದಿನದಿಂದ ದಿನೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಜನಸಾಮಾನ್ಯರ ಸುರಕ್ಷತೆ ದೃಷ್ಟಿಯಿಂದ ಪಂಜಾಬ್ ನ್ಯಾಷನಲ್ ಬ್ಯಾಂಕ್ ವತಿಯಿಂದ ಸೋಮವಾರ ಜಿಲ್ಲಾಧಿಕಾರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳನ್ನು ವಿತರಿಸಲಾಯಿತು.
ರಾಷ್ಟ್ರದಲ್ಲಿಯೇ ಅತಿ ದೊಡ್ಡ ಬ್ಯಾಂಕ್ ಆಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಹಕರಷ್ಟೆ ಅಲ್ಲ ಸಾರ್ವಜನಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳ ವಿತರರಣೆಗೆ ಮುಂದಾಗಿದೆ. ಇದನ್ನು ಸಾರ್ವಜನಿಕರ ಉಪಯೋಗಕ್ಕೆ ಬಳಸಿಕೊಳ್ಳುವಂತೆ ಬ್ಯಾಂಕ್ ಮ್ಯಾನೇಜರ್ ಶಿಬಾರಾಂ ಬೆಹರಾ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಯವರಲ್ಲಿ ಮನವಿ ಮಾಡಿದರು.