ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಅತಿ ಹೆಚ್ಚು 29 ಜನರಿಗೆ ಕೋವಿಡ್ ಸೋಂಕು ದೃಢ: ಸಾವಿನ ಸಂಖ್ಯೆ 7ಕ್ಕೆ ಏರಿಕೆ, ಸೋಂಕಿತರ ಸಂಖ್ಯೆ 247 ಕ್ಕೆ ಏರಿಕೆ…
1 min readಚಿತ್ರದುರ್ಗ:
ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ಹೆಲ್ತ್ ಬುಲೆಟಿನ್ ವರದಿಯಲ್ಲಿ ಮತ್ತೆ 29 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 247 ಕ್ಕೆ ಏರಿಕೆಯಾದಂತಾಗಿದೆ. ಅಲ್ಲದೆ ಸೋಮವಾರ ಇಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದ್ದು ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಸೋಮವಾರದ ವರದಿಯಲ್ಲಿ ಚಿತ್ರದುರ್ಗದ 14, 01, 33, 61, 45, 51, 40 ವರ್ಷದ 7 ಪುರುಷರು, 49, 33, 25, 07 ವರ್ಷದ 4 ಮಹಿಳೆಯರು ಸೇರಿ 11 ಮಂದಿಗೆ ಸೋಂಕು ದೃಢಪಟ್ಟಿದೆ. ಹೊಸದುರ್ಗದ 55 ವರ್ಷದ ಮಹಿಳೆ. ಹಿರಿಯೂರಿನ 32, 36, 37, 28, 32, 27, 35 ವರ್ಷದ 7 ಪುರುಷರು, 48 ವರ್ಷದ ಒಬ್ಬ ಮಹಿಳೆ ಸೇರಿ ಒಟ್ಟು 8 ಮಂದಿಗೆ ಸೋಂಕು ದೃಢಪಟ್ಟಿದೆ. ಹೊಳಲ್ಕೆರೆಯ 25, 49 ವರ್ಷದ ಇಬ್ಬರು ಪುರುಷರು. ಚಳ್ಳಕೆರೆ ತಾಲೂಕಿನ 27, 49, 52, 35 ವರ್ಷದ 4 ಪುರುಷರು, 35 ವರ್ಷದ ಒಬ್ಬ ಮಹಿಳೆ ಸೇರಿ 5 ಮಂದಿ ಸೇರಿದಂತೆ ಒಟ್ಟು 29 ಜನರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಚಳ್ಳಕೆರೆಯ 68 ವರ್ಷದ ಪುರುಷ ಹಾಗೂ ಚಿತ್ರದುರ್ಗ ದ 44 ವರ್ಷದ ಮಹಿಳೆ ಕೋವಿಡ್ ನಿಂದ ಮೃತಪಟ್ಟ ಪ್ರಕರಣ ವರದಿಯಾಗಿದೆ.
ಸೋಮವಾರ ಒಟ್ಟು 182 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದ್ದು, 29 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 247 ಕ್ಕೆ ಏರಿಕೆಯಾಗಿದ್ದು, ಇದುವರೆಗೆ ಐವರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 117 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 125 ಸಕ್ರಿಯ ಪ್ರಕರಣಗಳು ಇವೆ.
125 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 35, ಭರಮಸಾಗರ-02, ಹಿರಿಯೂರು ತಾಲ್ಲೂಕು ಧರ್ಮಪುರ-19, ಚಳ್ಳಕೆರೆ ತಾಲ್ಲೂಕು ಪರಶುರಾಂಪುರ- 09, ಹೊಸದುರ್ಗ ತಾಲ್ಲೂಕು ಬೆಲಗೂರು- 14, ಕೆ.ಕೆ. ಪುರ 03, ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ- 04, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್‍ನಲ್ಲಿ 06 ಜನ ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಪಾಸಿಟೀವ್ ಕಂಡುಬಂದು, ಬೇರೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 09. ಉಳಿದ 14 ಜನರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 60 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 2637 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ ಸಾರಿ ಮತ್ತು ಐಎಲ್‍ಐ, ಯುಆರ್‍ಐನ ಒಟ್ಟು 3496 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಜಿಲ್ಲೆಯಲ್ಲಿ 665 ಜನ ಹೋಂ ಕ್ವಾರಂಟೈನ್‍ನಲ್ಲಿ ಇದ್ದಾರೆ. ಈವರೆಗೆ 11,107 ಜನರ ಮಾದರಿ ಸಂಗ್ರಹಿಸಲಾಗಿದ್ದು, 8,206 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 205 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.