February 26, 2024

Chitradurga hoysala

Kannada news portal

ಮಾರ್ಚ್ 08ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

1 min read


ಚಿತ್ರದುರ್ಗ, ಮಾರ್ಚ್05:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 08ರಂದು ಬೆಳಿಗ್ಗೆ 11ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
 ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶಬಾಬು, ಸಂಸದ ಎ.ನಾರಾಯಣಸ್ವಾಮಿ, ಶಾಸಕರಾದ ಎಂ.ಚಂದ್ರಪ್ಪ, ಗೂಳಿಹಟ್ಟಿ ಡಿ.ಶೇಖರ್, ಟಿ.ರಘುಮೂರ್ತಿ, ಪೂರ್ಣಿಮಾ ಕೆ.ಶ್ರೀನಿವಾಸ್, ಜಿ.ರಘು ಆಚಾರ್, ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಬದರಿನಾಥ್, ನಗರಸಭೆ ಅಧ್ಯಕ್ಷೆ ಬಿ.ತಿಪ್ಪಮ್ಮ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವಿಜಯಲಕ್ಷಿ ಪ್ರಕಾಶ್ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರು ಭಾಗವಹಿಸಲಿದ್ದಾರೆ.
 ಚಿತ್ರ ಡಾನ್‍ಬಾಸ್ಕೊ ಸಂಸ್ಥೆಯ ಹೆಚ್.ಸಿ.ಮಂಜುನಾಥ್ ಹಾಗೂ ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಹಾಗೂ ನ್ಯಾಯವಾದಿ ಡಿ.ಕೆ.ಶೀಲ ಅವರು ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

About The Author

Leave a Reply

Your email address will not be published. Required fields are marked *