ರಸಪ್ರಶ್ನೆ ಸ್ವರ್ಧೆಯಿಂದ ಮಕ್ಕಳ ಮನಸ್ಸು ವಿಕಾಸಗೊಳ್ಳುತ್ತದೆ:ಫಾದರ್ ಸಾಜಿ
1 min readಚಿತ್ರದುರ್ಗ ಮಾ. ೫: ವಿದ್ಯಾರ್ಥಿಗಳು ವಿಜ್ಞಾನ ರಸಪ್ರಶ್ನೆಯಂತಹ ವೈಜ್ಞಾನಿಕ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವುದರಿಂದ ಮನಸ್ಸು ವಿಕಾಸವಾಗುತ್ತದೆ. ಜ್ಞಾನದ ಬಲ ಹೆಚ್ಚಾಗಿ, ಅಧ್ಯಯನ ಮಾಡಲು, ಓದುವಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗುತ್ತದೆ. ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಇದು ತುಂಬಾ ಸಹಕಾರಿ” ಎಂದು ಡಾನ್ ಬಾಕೋ ವಿದ್ಯಾಸಂಸ್ಥೆಯ ವ್ಯವಸ್ಥಾಪಕರು ಹಾಗೂ ನಿರ್ದೇಶಕರಾದ ಫಾದರ್ ಸಾಜಿ ಅಭಿಪ್ರಾಯಪಟ್ಟರು.
ಚಿತ್ರದುರ್ಗದ ಡಾನ್ ಬೊಸ್ಕೊ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸರ್ ಸಿ ವಿ ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಜ್ಞಾನ ವಿಷಯ ಪರಿವೀಕ್ಷಕ ಊ. ಗೋವಿಂದಪ್ಪ ಬಹುಮಾನ ವಿತರಿಸಿ ಮಾತನಾಡಿ,” ವಿಜ್ಞಾನ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಸದಾ ಜೀವಂತವಾಗಿಡಲು ಇಂತಹ ರಸಪ್ರಶ್ನೆ ಸ್ಪರ್ಧೆಗಳು ಹೆಚ್ಚು ಹೆಚ್ಚು ಆಗಬೇಕಿದೆ” ಎಂದರು.
ಕಾರ್ಯಕ್ರಮದಲ್ಲಿ ಸಾ.ಶಿ.ಇಲಾಖೆಯ ಮಹಾಲಿಂಗಪ್ಪ, ಚಿತ್ರದುರ್ಗ ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಜಿ.ಎಸ್.ಶಿವಣ್ಣ, ಕ.ರಾ.ವಿ.ಪ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಎಸ್.ಟಿ.ಸ್ವಾಮಿ, ರಸಪ್ರಶ್ನೆ ಸ್ಪರ್ಧೆಯ ಜಿಲ್ಲಾ ಸಂಯೋಜಕಿ ಶ್ರೀಮತಿ ಆಶಾ,ಮಂಜುನಾಥ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಚಳ್ಳಕೆರೆ ಯರ್ರಿಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲೆಯ ೩೦ ವಿವಿಧ ಪ್ರೌಢಶಾಲೆಗಳಿಂದ ಭಾಗವಹಿಸಿದ್ದ, ೧೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಮಾರ್ಗದರ್ಶಿ ಶಿಕ್ಷಕರು ಭಾಗವಹಿಸಿದ್ದರು. ೧.ಚಳ್ಳಕೆರೆಯ S ಖ S ಹೆರಿಟೇಜ್ ಶಾಲೆಯ ಮಹಾಂಕ್.ವಿ.ಜೈನ್ ಮತ್ತು ತಂಡ ಪ್ರಥಮ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿತು.೨. ಲಾಸ್ಯ ಚಂದ್ರಶೇಖರ್ ತಾವರೆ ಮತ್ತು ತಂಡ ದ್ವಿತೀಯ ಬಹುಮಾನ ಪಡೆಯಿತು.ಎಂದು ಕಾರ್ಯಕ್ರಮದ ಉಸ್ತುವಾರಿ ಎಚ್.ಎಸ್.ಟಿ.ಸ್ವಾಮಿ ತಿಳಿಸಿದ್ದಾರೆ.