May 12, 2024

Chitradurga hoysala

Kannada news portal

ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗದಿರಲಿ: ಜಿ.ಪಂ. ಅಧ್ಯಕ್ಷೆ ಶಶಿಕಲಾ ಸುರೇಶ್‍ಬಾಬು

1 min read

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಿ.ಪಂ. ಅಧ್ಯಕ್ಷೆ ಶಶಿಕಲಾ ಸುರೇಶ್‍ಬಾಬು
ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗದಿರಲಿ


ಚಿತ್ರದುರ್ಗ,ಮಾರ್ಚ್08:
ಹೆಣ್ಣು ಮಕ್ಕಳಿಗೆ ಶಿಕ್ಷಣದ ಅವಶ್ಯಕತೆ ಇದ್ದು, ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್‍ಬಾಬು ಹೇಳಿದರು.
ನಗರದ ತರಾಸು ರಂಗಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ಹೆಣ್ಣು ಮಕ್ಕಳು ಶಿಕ್ಷಣ ಪಡೆದಾಗ ಮಾತ್ರ ತನ್ನ ಜೀವನ ತಾನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಸಾಧನೆ ಮಾಡುವಲ್ಲಿ ಯಶಸ್ವಿಯಾಗುತ್ತಾರೆ. ಸಾವಿತ್ರಿ ಬಾಯಿಪುಲೆ ಅವರ ಹೋರಾಟ, ಶ್ರಮದ ಪ್ರತಿಫಲವೇ ಇಂದು  ಹೆಣ್ಣು ಮಕ್ಕಳು ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿದೆ ಎಂದರು.
ಇತ್ತಿಚೀನ ದಿನಗಳಲ್ಲಿ ಹೆಣ್ಣಿನ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳ, ಶೋಷಣೆ, ದೌರ್ಜನ್ಯ ನಡೆಯುತ್ತಿವೆ. ಇವುಗಳ ವಿರುದ್ಧ ಹೋರಾಡುವ ಮೂಲಕ ಆಕೆಗೆ ಎಲ್ಲವನ್ನೂ ಸಾಧಿಸುವ ಶಕ್ತಿ ಇದೆ ಎಂದು ತೋರಿಸಿ ಕೊಡುತ್ತಿದ್ದಾಳೆ. ಮಹಿಳೆ ಅಬಲೆ ಅಲ್ಲ ಸಬಲೆ ಎಂದು ಅಭಿಪ್ರಾಯಪಟ್ಟರು.
  ಮಾರ್ಚ್ 08ಕ್ಕೆ  ಮಾತ್ರ  ಮಹಿಳಾ ದಿನಾಚರಣೆ ಸೀಮಿತ ಆಗಬಾರದು. ಪ್ರತಿದಿನ ಮಹಿಳೆಯರ ಹಕ್ಕು ರಕ್ಷಣೆಗೆ ಹೋರಾಟ ಮಾಡುವ ಮೂಲಕ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣಗೊಳಿಸಲು ಸಾಧ್ಯ. ಪುರಾತನ ಕಾಲದಿಂದಲ್ಲೂ ಮಹಿಳೆಯನ್ನು ಪೂಜಾನೀಯ ಭಾವದಿಂದ ಕಾಣಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಉದ್ದೇಶದಿಂದ ಕೇಂದ್ರ ಮತಮ್ತು ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿಯೊಬ್ಬ ಪೋಷಕರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಪ್ರತಿಯೊಬ್ಬ ಮಹಿಳೆಯಲ್ಲಿ ಸಾಧಿಸುವ ಛಲ ಇರುತ್ತದೆ. ಅದನ್ನು ಶಿಕ್ಷಣದ ಮೂಲಕ ಸಕಾರಗೊಳಿಸಿಕೊಳ್ಳಬೇಕು. ಪ್ರತಿಯೊಬ್ಬ ಪುರುಷನು ಮಹಿಳೆಯರನ್ನು ಗೌರವಿಸಿದರೇ ಅದುವೇ ಸಮಾಜಕ್ಕೆ ನೀಡುವ ಕೊಡುಗೆಯಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾತನಾಡಿ, ಬಾಲ್ಯ ವಿವಾಹ ಕಾಯ್ದೆ ಪ್ರಕಾರ 18 ವರ್ಷಕ್ಕಿಂತ ಕಡಿಮೆ ಇರುವ ಹೆಣ್ಣು ಮಗುವಿಗೆ ಮದುವೆ ಮಾಡುವುದು ಮತ್ತು ಈ ವಿವಾಹದಲ್ಲಿ ಭಾಗಿಯಾಗುವ ಪ್ರತಿಯೊಬ್ಬರು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧಿಗಳು ಆಗುತ್ತಾರೆ. ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಪ್ರತಿಯೊಬ್ಬರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿ ದೇವಿ ಮಾತನಾಡಿ, ಹೆಣ್ಣು ಮಕ್ಕಳ ಸ್ವಾವಲಂಬಿ ಜೀವನಕ್ಕೆ, ಆತ್ಮಗೌರವಕ್ಕೆ ಶಿಕ್ಷಣದ ಪಾತ್ರ ಮಹತ್ವದಾಗಿದೆ ಎಂದರು.
ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಹಾಗೂ ನ್ಯಾಯವಾದಿ ಡಿ.ಕೆ.ಶೀಲ ಅವರು ವಿಶೇಷ ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ಕ್ರೀಡಾ, ನಾವೀನ್ಯತೆ, ಶೈಕ್ಷಣಿಕ, ಕಲೆ, ಸಂಗೀತ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಸಾಧನೆಗೈದ ಮಕ್ಕಳಿಗೆ ಸನ್ಮಾನ ಮಾಡಲಾಯಿತು ಹಾಗೂ ಪೋಷಣ್ ಪಕ್ವಾಡ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
 ಕಾರ್ಯಕ್ರಮದಲ್ಲಿ ಹಿರಿಯೂರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಜಿಲ್ಲಾ ಪಂಚಾಯಿತಿ ಸದಸ್ಯೆ ಚಂದ್ರಿಕಾ ಶ್ರೀನಿವಾಸ್, ಸ್ತ್ರೀ ಶಕ್ತಿ ಒಕ್ಕೂಟ ಅಧ್ಯಕ್ಷೆ ಕೊಲ್ಲಿಲಕ್ಷ್ಮೀ, ತಾಲ್ಲೂಕು ಪಂಚಾಯಿತಿ ಸದಸ್ಯೆ ಚಂದ್ರಕಲಾ ಸುರೇಶ್, ಚಿತ್ರ ಡಾನ್‍ಬಾಸ್ಕೊ ಸಂಸ್ಥೆಯ ಹೆಚ್.ಸಿ. ಮಂಜುನಾಥ್,  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಎಸ್.ರಾಜಾನಾಯಕ್, ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಜೆ.ವೈಶಾಲಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯಿತ್ರಿ ಸೇರಿದಂತೆ ಇತರೆ ಇಲಾಖಾಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *