ಸಹಾಯಕ ನಿರ್ದೇಶಕರ ಹುದ್ದೆ ಅಧಿಕಾರ ಸ್ವೀಕಾರ
1 min readಸಹಾಯಕ ನಿರ್ದೇಶಕರ ಹುದ್ದೆ ಅಧಿಕಾರ ಸ್ವೀಕಾರ
ಚಿತ್ರದುರ್ಗ,ಮಾರ್ಚ್08:
ಚಿತ್ರದುರ್ಗದ ಕನ್ನಡ ಮತ್ತು ಸಂಸ್ಕøತಿಯ ಇಲಾಖೆಯ ಸಹಾಯಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಜಿಲ್ಲಾ ವಾರ್ತಾಧಿಕಾರಿ ಧನಂಜಯಪ್ಪ.ಬಿ ಸೋಮವಾರ ಅಧಿಕಾರ ವಹಿಸಿಕೊಂಡರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಹುದ್ದೆಯು ಖಾಲಿ ಇದ್ದು ಪ್ರಭಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರವಿಚಂದ್ರ ಅವರು ಅಧಿಕಾರ ಹಸ್ತಾಂತರಿಸಿದರು.
ಕನ್ನಡ ಮತ್ತು ಸಂಸ್ಕøತಿಯ ಇಲಾಖೆ ವತಿಯಿಂದ ನಡೆಯುವ ಜಯಂತಿಗಳು ಮತ್ತು ಇತರೆ ಕಾರ್ಯಕ್ರಮಗಳನ್ನು ಸುಸೂತ್ರವಾಗಿ ನಡೆಸುವ ದೃಷ್ಠಿಯಿಂದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿಯವರು ಖಾಲಿ ಇದ್ದ ಹುದ್ದೆಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ಆದೇಶಿಸಿದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸಂಬಂಧಿಸಿದ ಸರ್ಕಾರಿ, ಆರೆ ಸರ್ಕಾರಿ ಪತ್ರ ವ್ಯವಹಾರವನ್ನು ಇವರ ಹೆಸರಿನಲ್ಲಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ತ.ರಾ.ಸು.ರಂಗಮಂದಿರ, ಚಿತ್ರದುರ್ಗ ಈ ವಿಳಾಸಕ್ಕೆ ಕಳುಹಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08194-224496 ದೂರವಾಣಿಗೆ ಸಂಪರ್ಕಿಸಬಹುದಾಗಿದೆ.