ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಳೆ ಬೆಳಗ್ಗೆ ಸುದ್ದಿಗೋಷ್ಠಿ ..
1 min readಬೆಂಗಳೂರು : ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದೆ, ಇದರ ನಡುವೆಯೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಳೆ ಸುದ್ದಿಗೋಷ್ಟಿ ಕರೆದಿದ್ದಾರೆ.
ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಟಿ ಕರೆಯಲಾಗಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಮೇಶ್ ಜಾರಕಿಹೊಳಿ ನಡೆಸುತ್ತಿರುವ ಮೊದಲ ಸುದ್ದಿಗೋಷ್ಟಿ ಇದಾಗಿದೆ. ನಿನ್ನೆಯಷ್ಟೇ ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಟಿ ನಡೆಸಿದ್ದರು.
ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ಬಯಲಾಗುತ್ತಿದ್ದಂತೆ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಳೆ ಸುದ್ದಿ ಗೋಷ್ಠಿ ಕರೆದಿರುವುದು ಎಲ್ಲಾರಿಗೂ ಕುತೂಹಲ ಮೂಡಿದೆ..