ಪೊಳ್ಳು ಭರವಸೆಗಳಿಂದ ಬಿಜೆಪಿ ಜನರಿಗೆ ಮೋಸ ಮಾಡುತ್ತಿದೆ: ಬಿ.ಎನ್.ಚಂದ್ರಪ್ಪ .
1 min readಚಳ್ಳಕೆರೆ-09: ಕೇಂದ್ರ, ರಾಜ್ಯ ಸರ್ಕಾರದ ಪ್ರತಿದಿನದ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ದೇಶದಲ್ಲಿ ಬದುಕಲು ಸಾಧ್ಯವಾಗುತ್ತಿಲ್ಲ. ಪೊಳ್ಳು ಭರವಸೆಯಿಂದ ಜನರನ್ನು ಮೋಸಗೊಳಿಸುತ್ತಿರುವ ಬಿಜೆಪಿಯನ್ನು ಈ ದೇಶದಿಂದಲೇ ಹೊರಹಾಕಿ ಎಂದು ಸಂಸದ ಬಿ.ಎನ್.ಚಂದ್ರಪ್ಪ ಹೇಳಿದರು.
ನಗರದ ಜಗಲ್ಯೂರಜ್ಜ ದೇವಸ್ಥಾನದಿಂದ ಶಾಸಕ ಟಿ ರಘುಮೂರ್ತಿ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ಕಾಯ್ದೆಗಳನ್ನು ಖಂಡಿಸಿ ಬೃಹತ್ ಪಾದಯಾತ್ರೆ, ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಬಿ.ಜೆ.ಪಿ ನೇತೃತ್ವದ ಸರ್ಕಾರಗಳು ಜನವಿರೋಧಿ ನೀತಿಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಹಾಗೂ ಮೂರು ಕರಾಳ ಕೃಷಿ ಕಾಯ್ದೆ ಜಾರಿಗೆ ತಂದಿರುವುದನ್ನು ಖಂಡಿಸಿದರು.
ಚಳ್ಳಕೆರೆ ಶ್ರೀ ಜಗಳೂರಜ್ಜ ಮಹಾಸ್ವಾಮಿ ದೇವಸ್ಥಾನದಿಂದ ಸುಮಾರು ನಾಲ್ಕು ಕಿ.ಮೀ ದೂರ ಪಾದಯಾತ್ರೆ ಮೂಲಕ ತಹಶೀಲ್ದಾರ್ ಕಛೇರಿ ಆಗಮಿಸಿ ಮನವಿ ಅರ್ಪಿಸಿದರು.
ಶಾಸಕ ಟಿ.ರಘುಮೂರ್ತಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಶಾಸಕರು ಇರುವ ಕ್ಷೇತ್ರಗಳಿಗೆ ರಾಜ್ಯ ಸರ್ಕಾರ ಯಾವುದೇ ಅನುದಾನ ನೀಡುತ್ತಿಲ್ಲ, ಮಂಜೂರಾಗಿದ್ದ ಅನುದಾನವನ್ನು ವಾಪಾಸ್ ಪಡೆದು ಜನವಿರೋಧಿ ದೋರಣೆ ಮಾಡುತ್ತಿದೆ. ಕೊರೋನಾ ಹೆಸರಿನಲ್ಲಿ ಜನರನ್ನು ಸುಳ್ಳು ದಾರಿಗೆ ದೂಡುತ್ತಿದೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ರೈತರಿಗೆ ಯಾವುದೇ ಬೆಲೆ ನೀಡದೆ ಅವರ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕ್ಷೇತ್ರ ವ್ಯಾಪ್ತಿಯ ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಎಲ್ಲರೂ ಸೇರಿ ರೈತರು ಹಾಗೂ ಕಾರ್ಮಿಕರ ಬೆನ್ನಿಗೆ ನಿಂತು ಬೆಂಬಲ ಸೂಚಿಸಿದರು. ಕೇಂದ್ರ, ರಾಜ್ಯ ಬಿ.ಜೆ.ಪಿ ನೇತೃತ್ವದ ಸರ್ಕಾರಗಳು ಜನವಿರೋಧಿ ನೀತಿಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಹಾಗೂ ಮೂರು ಕರಾಳ ಕೃಷಿ ಕಾಯ್ದೆ ರದ್ದು ಮಾಡಬೇಕು ಎಂದು ಆಗ್ರಹ ಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಬಿ ಎಂ ಚಂದ್ರಪ್ಪ, ಜಿ ಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಸದಸ್ಯ ಬಿ.ಪಿ.ಪ್ರಕಾಶ್ ಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ ತಾಜ್ ಪೀರ್, ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಕಾರ್ಯಾಧ್ಯಕ್ಷ ಹಾಲೇಶ್,ತಾ ಪಂ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ವೀರೇಶ್, ನಗರಸಭೆ ಅಧ್ಯಕ್ಷಸಿ.ಬಿ.ಜಯಲಕ್ಷ್ಮಿ, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗೌಡ, ಮಾಜಿ ಅಧ್ಯಕ್ಷ ಲಕ್ಷ್ಮೀದೇವಿ , ನಿಂಗಮ್ಮ , ಸದಸ್ಯರಾದ ಕೆ. ವೀರಭದ್ರಪ್ಪ, ವೈ.ಪ್ರಕಾಶ್, ಮಲ್ಲಿಕಾರ್ಜುನ, ಚಳ್ಳಕೆರಪ್ಪ, ಮಂಜುಳ ಪ್ರಸನ್ನಕುಮಾರ್, ಸುಮ ಭರಮಯ್ಯ, ಸುಜಾತ ಪ್ರಹ್ಲಾದ್, ಕವಿತ ಬೋರಯ್ಯ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಸಾರ್ವಜನಿಕರು ಹಾಜರಿದ್ದರು.