March 3, 2024

Chitradurga hoysala

Kannada news portal

ಸರ್ಕಾರಿ ಇಲಾಖೆಗಳಲ್ಲಿ ವಿಕಲಚೇತನರಿಗೆ ರ್ಯಾಂಪ್, ವಿಕಲಚೇತನ ಸ್ನೇಹಿ ಶೌಚಾಲಯ ನಿರ್ಮಿಸಿ:ಡಿಸಿ ಸೂಚನೆ

1 min read

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ
ಸರ್ಕಾರಿ ಇಲಾಖೆಗಳಲ್ಲಿ ವಿಕಲಚೇತನರಿಗೆ ರ್ಯಾಂಪ್, ವಿಕಲಚೇತನ ಸ್ನೇಹಿ ಶೌಚಾಲಯ ನಿರ್ಮಿಸಿ


ಚಿತ್ರದುರ್ಗ,ಮಾರ್ಚ್10:
ಎಲ್ಲ ಸರ್ಕಾರಿ ಇಲಾಖೆಯ ಕಟ್ಟಡಗಳಲ್ಲಿ ವಿಕಲಚೇತನರಿಗೆ ರ್ಯಾಂಪ್, ಲಿಪ್ಟ್ ವ್ಯವಸ್ಥೆ, ರೇಲಿಂಗ್ ಹಾಗೂ ವಿಕಲಚೇತನ ಸ್ನೇಹಿ ಶೌಚಾಲಯಗಳ ನಿರ್ಮಾಣಕ್ಕೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016, ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರೀಕರ ರಕ್ಷಣಾ ಕಾಯ್ದೆ-2007,  ಮದ್ಯ ಮತ್ತು ಮಾದಕ ವ್ಯಸನ ಮುಕ್ತ ಕೇಂದ್ರ, ನ್ಯಾಷನಲ್ ಟ್ರಸ್ಟ್ ಆಕ್ಟ್-1999,  ವಿಕಲಚೇತನ ಪುನರ್ವಸತಿ ಕೇಂದ್ರದ  ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016 ಕಾಯ್ದೆಯು ವಿಕಲಚೇತರಿಗೆ ಮೀಸಲಿರಿಸಿದ ಶೇ.5 ರಷ್ಟು ಮೀಸಲಿರುವ ಅನುದಾನದ ಬಳಕೆ ಬಗ್ಗೆ ಎಲ್ಲ ಇಲಾಖೆಯ ಅಧಿಕಾರಿಗಳು ಅಗತ್ಯವಾದ ಕ್ರಮ ವಹಿಸುವಂತೆ ಸೂಚನೆ ನೀಡಿದರು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ  ಹುದ್ದೆಗೆ ಶೀಘ್ರವಾಗಿ ನೇಮಕಾತಿ ಮಾಡಿ ವಿಕಲಚೇತನರಿಗೆ ಸೌಲಭ್ಯಗಳನ್ನು ಒದಗಿಸಿಸಬೇಕು ಎಂದು ತಾಕೀತು ಮಾಡಿದರು.
ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ನಾಗರೀಕರ ರಕ್ಷಣಾ ಕಾಯ್ದೆ ಅಡಿಯಲ್ಲಿ ಹಿರಿಯ ನಾಗರಿಕರಿಗೆ  ಅರಿವು ಮೂಡಿಸುವ ಕಾರ್ಯಕ್ರಮವನ್ನು ಹೆಚ್ಚನ ಸಂಖ್ಯೆಯಲ್ಲಿ ಆಯೋಜನೆ ಮಾಡಿ ಹಾಗೂ ಶಾಲಾ ಕಾಲೇಜುಗಳಲ್ಲಿ ಮದ್ಯ ಮತ್ತು ಮಾದಕ ವ್ಯಸನದಿಂದ  ವ್ಯಕ್ತಿಗಳ ಮೇಲೆ ಆಗುವ ದೈಹಿಕ ಮತ್ತು ಮಾನಸಿಕ, ಸಾಮಾಜಿಕ, ಆರ್ಥಿಕ, ಕೌಟುಂಬಿಕ ಸಮಸ್ಯೆಗಳ ಬಗ್ಗೆ ವಿಡಿಯೋ ದೃಶ್ಯಗಳ ಮೂಲಕ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಇಲಾಖೆಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳು ಮಾಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಜಿಲ್ಲೆಯಲ್ಲಿರುವ ವಿವಿಧ ರೀತಿಯ ವಿಕಲಚೇತನರಿಗೆ, ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ(ಯುಡಿಐಡಿ) ದೊರೆತಿಲ್ಲವೋ ಅಂತಹ ವಿಕಲಚೇತನರಿಗೆ ಆದ್ಯತೆಯ ಮೇರೆಗೆ ಜಿಲ್ಲಾಸ್ಪತ್ರೆಯ ಮೂಲಕ ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ ಮಾಡಿಸುವ ಕಾರ್ಯವನ್ನು ತ್ವರಿತವಾಗಿ ದೊರೆಯುವಂತೆ ಮಾಡಬೇಕು ಎಂದು  ಅಧಿಕಾರಿಗಳಿಗೆ ಸೂಚಿಸಿದರು.  
ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ(ಯುಡಿಐಡಿ) ವಿತರಣೆ ನೀಡುವಲ್ಲಿ ರಾಜ್ಯದಲ್ಲಿಯೇ ಚಿತ್ರದುರ್ಗ ಜಿಲ್ಲೆಯು 2ನೇ ಸ್ಥಾನದಲ್ಲಿದೆ ಇನ್ನೂ ಮುಂದೆ ರಾಜ್ಯಕ್ಕೆ ಮೊದಲ ಸ್ಥಾನಕ್ಕೆ ಬರುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ನ್ಯಾಷನಲ್ ಟ್ರಸ್ಟ್ ಆಕ್ಟ್ ಸ್ಥಳೀಯ ಮಟ್ಟ ಸಮಿತಿ ರಚನೆಯಾಗಿದ್ದು, ಅದರಲ್ಲಿ 18 ವರ್ಷ ಮೇಲ್ಪಟ್ಟ  ಆಟಿಸಂ, ಬಹುವಿಧ ಅಂಗವಿಕಲತೆ, ಬುದ್ದಿಮಾಂದ್ಯ, ವಿಕಲಚೇತರಿಗೆ ಪೋಷಕತ್ವ ಪ್ರಮಾಣ ಪತ್ರ ಪಡೆಯಲು ಪೋಷಕರು ಮತ್ತು ರಕ್ತ ಸಂಬಂಧಿಕರಿಗೆ ಕ್ಷೇತ್ರಗಳಲ್ಲಿ ಕಾರ್ಯಕರ್ತರು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ನರೇಗಾ ಯೋಜನೆ ಅಡಿಯಲ್ಲಿ ವಿಕಲಚೇತನರಿಗೆ ಜಾಬ್ ಕಾರ್ಡ್ ಇಲ್ಲದವರಿಗೆ ಕಾರ್ಡ್ ವಿತರಣೆ ಮಾಡುವುದು ಮತ್ತು ಜಾಬ್ ಕಾರ್ಡ್ ಚೀಟಿ ಹೊಂದಿರುವವರಿಗೆ ಉದ್ಯೋಗ ಒದಗಿಸುವ ಕಾರ್ಯವನ್ನು ಇಲಾಖೆಯ ವತಿಯಿಂದ ಮಾಡಲಾಗುತ್ತದೆ. 189 ಗ್ರಾಮ ಪಂಚಾಯಿತಿಯಲ್ಲಿ 168 ಗ್ರಾಮ ಪಂಚಾಯಿತಿಗಳಲ್ಲಿ ವಿವಿದೋದ್ದೇಶ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ. ಚಿತ್ರದುರ್ಗ ತಾಲ್ಲೂಕಿನ 5 ಗ್ರಾಮ ಪಂಚಾಯಿತಿ ಹಾಗೂ ಹಿರಿಯೂರಿನ 6 ಗ್ರಾಮ ಪಂಚಾಯಿತಿ  ವಿವಿದೋದ್ದೇಶ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಗೆ ಖಾಲಿ ಇದ್ದು ಇದಕ್ಕೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದ್ದು, ಇನ್ನು 10 ದಿನಗಳಲ್ಲಿ ನೇಮಕಾತಿ ಮಾಡಲಾಗುವುದು  ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೈಶಾಲಿ ಅವರು ಸಭೆಗೆ ತಿಳಿಸಿದರು.
 ಜಿಲ್ಲೆಯಲ್ಲಿ ವಿಕಲಚೇತನರಿಗೆ  39 ಜಾಗೃತಿ ಶಿಬಿರಗಳು, 30 ವೈದ್ಯಕೀಯ ತಾಪಸಣಾ ಶಿಬಿರಗಳು, 15 ಬುದ್ದಿಮಾಂದ್ಯರಿಗೆ ದೈನಂದಿನ ಕೌಶಲ್ಯ ಮತ್ತು ಆಪ್ತ ಸಮಲೋಚನ ತರಬೇತಿಗಳು, 51 ವಿಕಲಚೇತನರಿಗೆ ಉಚಿತವಾಗಿ ಕೃತಕ ಕಾಲುಗಳ ಜೋಡಣೆ ಮಾಡಲಾಗಿದೆ. ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಕಂಪ್ಯೂಟರ್ ತರಬೇತಿ ನೀಡಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ನಂದಿನಿ ದೇವಿ, ಉಪವಿಭಾಗಾಧಿಕಾರಿ  ವಿ. ಪ್ರಸನ್ನ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೈಶಾಲಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *