ಗುಡ್ ನ್ಯೂಸ್: ಉದ್ಯೋಗ ಖಾತರಿ ಬಿಎಫ್‍ಟಿ ಹುದ್ದೆಗೆ ಅರ್ಜಿ
1 min readಉದ್ಯೋಗ ಖಾತರಿ ಬಿಎಫ್‍ಟಿ ಹುದ್ದೆಗೆ ಅರ್ಜಿ ಆಹ್ವಾನ
ಚಿತ್ರದುರ್ಗ,ಮಾರ್ಚ್09;
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ, ಜಿಲ್ಲೆಯ 6 ತಾಲೂಕುಗಳಲ್ಲಿ 08 ಜನ ಬಿಎಫ್‍ಟಿಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದು, ಮಾರ್ಚ್ 25 ಕೊನೆಯ ದಿನಾಂಕವಾಗಿದೆ.
ಸ್ಕ್ರೀನಿಂಗ್ ಪರೀಕ್ಷ ಏಪ್ರಿಲ್ 08 ಕ್ಕೆ ನಡೆಸಲಾಗುವುದು. 1;3 ಅನುಪಾತದಲ್ಲಿ ಸ್ಕ್ರೀನಿಂಗ್ ಪರೀಕ್ಷ ನಡೆಸಲಾಗುವುದು. ಅದೇ ದಿನ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಅರ್ಹತೆ, ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರನಾಗಿರ ಬೇಕು, ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಮಹಿಳೆಯರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಕನಿಷ್ಠ 45 ವರ್ಷಕ್ಕಿಂತ ಕಡಿಮೆ ವಯೋಮಿತಿ ಹೂಂದಿರಬೇಕು ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08194-229910/08194-223058 ಸಂಖ್ಯೆಗೆ ಹಾಗೂ ಜಿ.ಪಂ. ನರೇಗಾ ಶಾಖೆ ಗೆ ಸಂಪರ್ಕಿಸಿ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ; ಕೆ.ನಂದಿನಿದೇವಿ ತಿಳಿಸಿದ್ದಾರೆ.
=====